ಕಲಬುರಗಿ: ತಾಲೂಕಿನ ಉಪಳಾಂವ ಗ್ರಾಮದ ಶ್ರೀ ಮಲ್ಲಿಕಾರ್ಜುನ ದೇವರ ಏಳನೇಯ ಜಾತ್ರಾ ಮಹೋತ್ಸವ ನಿಮಿತ್ಯವಾಗಿ ಪ್ರತಿ ವರ್ಷದಂತೆ ಈ ವರ್ಷವೂ ಶ್ರಾವಣ ಮಾಸದಲ್ಲಿ ಆಗಸ್ಟ್ 15 ರಿಂದ 26 ನೇ ಆಗಸ್ಟ್ ವರೆಗೆ ರಾತ್ರಿ 8.30 ರಿಂದ 10.30ರವರೆಗೆ ಹಾರಕೂಡ ಚನ್ನಬಸವ ಶಿವಯೋಗಿಗಳ ಮಹಾಪುರಾಣ ಜರುಗುವುದು. ಮಹಾಪುರಾಣವನ್ನು ಶ್ರೀ ಮಲ್ಲಿಕಾರ್ಜುನ ಸ್ವಾಮಿ ಟೆಂಗಳಿಯವರು ನಡೆಸಿಕೊಡಲಿದ್ದಾರೆ.
ವಾಯಿಗಳಾದ ಶಿವಶರಣಯ್ಯ ಸ್ವಾಮಿ ಬೀದಿಮನಿ ಹಾಗೂ ತಬಲಾ ಸಾಥ ಮಹಾಂತೇಶ ಹರವಾಳ ಇವರಿಂದ ಸಂಗೀತ ಸೇವೆ ನಡೆಯಲಿದೆ.
ಮಹಾಪುರಾಣ ಉದ್ಘಾಟನೆಯನ್ನು ದಿನಾಂಕ ೧೫ರಂದು ರಾತ್ರಿ ೮.೩೦ಕ್ಕೆ ಶ್ರೀನಿವಾಸ ಸರಡಗಿ ಪೂಜ್ಯರಾದ ಷ.ಬ್ರ. ಡಾ. ರೇವಣಸಿದ್ಧ ಶಿವಾಚಾರ್ಯರು ನೆರವೇರಿಸಲಿದ್ದಾರೆ. ಕಾರ್ಯಕ್ರಮದಲ್ಲಿ ಪೂಜ್ಯರು, ರಾಜಕೀಯ ಧುರಿಣರು, ಸಮಾಜ ಸೇವಕರು, ಕಲಾವಿದರು ಭಾಗವಹಿಸಲಿದ್ದಾರೆ. ಗ್ರಾಮಸ್ಥರು ಹಾಗೂ ಸುತ್ತಮುತ್ತಲಿನ ಗ್ರಾಮಸ್ಥರು ಮಹಾಪುರಾಣದ ಕಾರ್ಯಕ್ರಮದಲ್ಲಿ ಭಾಗವಹಿಸಿ ಪುನೀತರಾಗಬೇಕೆಂದು ಶ್ರೀ ಮಲ್ಲಿಕಾರ್ಜುನ ದೇವಸ್ಥಾನ ಟ್ರಸ್ಟ್‌ನ ಅಧ್ಯಕ್ಷರಾದ ಶ್ರೀ ವಿಜಯಕುಮಾರ ಬಿರಾದಾರ ಉಪಳಾಂವ ಪತ್ರಿಕಾ ಪ್ರಕಟಣೆಯ ಮೂಲಕ ತಿಳಿಸಿದ್ದಾರೆ.
ಕಲಬುರಗಿ: ಮಹಿಳೆಯರ ಸಹಭಾಗಿತ್ವ ಮತ್ತು ಕೊಡುಗೆಯಿಲ್ಲದೆ ದೇಶದ ಸರ್ವಾಂಗೀಣ ಅಭಿವೃದ್ಧಿ ಅಸಾಧ್ಯ ಎಂದು ಶರಣಬಸವೇಶ್ವರ ವಿದ್ಯಾವರ್ಧಕ ಸಂಘದ ಅಧ್ಯಕ್ಷೆ ಮಾತೋಶ್ರೀ…
ಕಲಬುರಗಿ: ಕಲಬುರಗಿ ದಕ್ಷಿಣ ಮತಕ್ಷೇತ್ರದ ಶಾಸಕ ಅಲ್ಲಮಪ್ರಭು ಪಾಟೀಲ ಅವರು ಶನಿವಾರ ಸಂಜೆ ಕ್ಷೇತ್ರದ ಭೀಮಳ್ಳಿ ಗ್ರಾಮದ ರೈತರ ಹೊಲಗಳಿಗೆ…
ಕಲಬುರಗಿ: ಕಷ್ಟಗಳು ಬಂದಾಗ ಕುಗ್ಗದೆ, ಆ ಕಷ್ಟಗಳನ್ನು ಸವಾಲಾಗಿ ಸ್ವೀಕರಿಸಿ ಮೇಲೇಳಬೇಕು ಎಂದು ತಾಜ್ ನಗರದ ಆರೋಗ್ಯ ಕೇಂದ್ರದ ಹಿರಿಯ…
ಪರೋಪಕಾರ ಸೇವೆಯಿಂದ ಆತ್ಮತೃಪ್ತಿ: ಹಿರೇಮಠ ಕಲಬುರಗಿ: ನಗರ ಹೊರವಲಯದ ಸೈಯದ್ ಚಿಂಚೋಳಿ ರಸ್ತೆಯ ಬಳಿ ಇರುವ ಕೆವಿಪಿ ದಣ್ಣೂರ ಪಿಯು…
ವಾಡಿ (ಕಲಬುರಗಿ): ಪುರಸಭೆ ಮಾಜಿ ಸದಸ್ಯ ಹಾಗೂ ಕಾಂಗ್ರೆಸ್ ಪಕ್ಷದ ಯುವ ಮುಖಂಡ ಸೂರ್ಯಕಾಂತ ರದ್ದೇವಾಡಿ ಅವರು ಶುಕ್ರವಾರ…
ಕಲಬುರಗಿ: ಸಂಡೂರ, ಶಿಗ್ಗಾವಿ ಹಾಗೂ ಚನ್ನಪಟ್ಟಣ ಸೇರಿದಂತೆ ಮೂರು ವಿಧಾಸಭಾ ಕ್ಷೇತ್ರದ ಉಪ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷದ ಅಭ್ಯರ್ಥಿಗಳು ಭರ್ಜರಿ…