ಕಲಬುರಗಿ: ಕರ್ನಾಟಕ ರಾಜ್ಯ ಹಿಂದುಳಿದ ವರ್ಗಗಳ ಅಲೆಮಾರಿ/ಅರೆ-ಅಲೆಮಾರಿ ವಿಮುಕ್ತ ಬುಡಕಟ್ಟು ಸಮುದಾಯಗಳ ಮಹಾ ಒಕ್ಕೂಟ, ಬೆಂಗಳೂರು ಇದರ ಅಡಿಯಲ್ಲಿ ಕಲಬುರಗಿ ಜಿಲ್ಲಾ ಘಟಕದ ಉದ್ಘಾಟನಾ ಸಮಾರಂಭವನ್ನು ಶನಿವಾರ ಬೆಳಿಗ್ಗೆ 10:00 ಘಂಟೆಗೆ ನಗರದ ರಾಮ ಮಂದಿರದ ಹಿಂದುಗಡೆ ಇರುವ ಶ್ರೀ ಶಿವಶರಣ ಹರಳಯ್ಯ ಸಮುದಾಯ ಭವನದಲ್ಲಿ ಆಯೋಜಿಸಲಾಗಿದೆ.
ಅಲೆಮಾರಿ/ಅರೆ-ಅಲೆಮಾರಿ ಹಾಗೂ ವಿಮುಕ್ತ ಬುಡಕಟ್ಟು ಸಮುದಾಯದವರು ಕಾರ್ಯಕ್ರಮದಲ್ಲಿ ತಪ್ಪದೇ ಭಾಗವಹಿಸಬೇಕೆಂದು ಕಲಬುರಗಿ ಜಿಲ್ಲಾ ಘಟಕದವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.