ಕಲಬುರಗಿ: ನಗರದ ಪ್ರತಿಷ್ಠಿತ ಹೈದ್ರಾಬಾದ ಕರ್ನಾಟಕ ಶಿಕ್ಷಣ ಸಂಸ್ಥೆಯ ವ್ಹಿ.ಜಿ. ಮಹಿಳಾ ಮಹಾವಿದ್ಯಾಲಯದ ಗ್ರಂಥಾಲಯ ಹಾಗೂ ಹೈದ್ರಾಬಾದ ಕರ್ನಾಟಕ ಗ್ರಂಥಪಾಲಕರ ಸಂಘದ ಸಂಯುಕ್ತಾಶ್ರಯದಲ್ಲಿ ಡಾ.ರಂಗನಾಥನರವರ ಹುಟ್ಟುಹಬ್ಬದ ಅಂಗವಾಗಿ ಗ್ರಂಥಪಾಲಕರ ದಿನಾಚರಣೆ ಆಚರಿಸಲಾಯಿತು.
ಕಾರ್ಯಕ್ರಮದಲ್ಲಿ ಮುಖ್ಯ ಅಥಿತಿಯಾಗಿ ಡಾ. ಎಸ್.ಎಲ್. ಕಾಡದೇವರಮಠ ಮತ್ತು ಇನ್ನೋರ್ವ ಅತಿಥಿ ಡಾ.ಸುರೇಶ ಜಂಗೆ ಅವರು ಭಾಗವಹಿಸಿದ್ದು, ಮಹಾವಿದ್ಯಾಲಯದ ಪ್ರಾಚಾರ್ಯರಾದ ಡಾ.ಈಶ್ವರಯ್ಯ ಮಠ ಅವರು ಅಧ್ಯಕ್ಷತೆ ವಹಿಸಿದ್ದರು. ಹಾಗೇಯೇ ಮಹಾವಿದ್ಯಾಲಯದ ಆಯ್.ಕ್ಯೂ.ಎ.ಸಿ. ಸಂಯೋಜಕರು ಡಾ.ರಾಜೇಂದ್ರ ಕೊಂಡಾ ಮತ್ತು ನ್ಯಾಕ್ ಸಂಯೋಜಕರು ಡಾ.ಫರಝಾನಾ ಜಬೀನ ರವರು ವೇದಿಕೆ ಮೇಲೆ ಉಪಸ್ಥಿತರಿದ್ದರು.
ಮುಖ್ಯ ಅತಿಥಿಗಳು ಹಾಗೂ ಅತಿಥಿಗಳು ಗ್ರಂಥಾಲಯದ ಬಗ್ಗೆ ಮಹಾವಿದ್ಯಾಲಯದ ವಿದ್ಯಾರ್ಥಿಗಳನ್ನು ಉದ್ದೇಶಿಸಿ ಮಾತನಾಡಿದರು. ಹಾಗೆಯೇ ಇದರ ಅಂಗವಾಗಿ ವಿದ್ಯಾರ್ಥಿಗಳಿಗೆ ಪ್ರಬಂಧ ಸ್ಪರ್ದೇಯನ್ನು ಏರ್ಪಡಿಸಲಾಗಿತ್ತು. ಸ್ಪರ್ಧೆಯಲ್ಲಿ ವಿಜೆತರಾದ ಸ್ಪರ್ಧಾಳುಗಳಿಗೆ ಬಹುಮಾನ ವಿತರಿಸಿ, ಇದೇ ಸಂದರ್ಭದಲ್ಲಿ ಹೊಸದಾಗಿ ಆಯ್ಕೆಯಾದ ಹೈದ್ರಾಬಾದ ಕರ್ನಾಟಕ ಭಾಗದ ಗ್ರಂಥಪಾಲಕರಿಗೆ ಹಾಗೂ ನಿವೃತ್ತಿ ಹೊಂದಿದ ಗ್ರಂಥಪಾಲಕರಿಗೆ ಹೈದ್ರಾಬಾದ ಕರ್ನಾಟಕ ಗ್ರಂಥಪಾಲಕರ ಸಂಘದವತಿಯಿಂದ ಸನ್ಮಾನ ಕಾರ್ಯಕ್ರಮ ನೇರವೆರಿತ್ತು. ಕಾರ್ಯಕ್ರಮದಲ್ಲಿ ಮಹಾವಿದ್ಯಾಲಯದ ಗ್ರಂಥಾಲಯದ ಮುಖ್ಯಸ್ಥರು ಶ್ರೀಮತಿ ಸಾವಿತ್ರಿ ಬ.ಪಟ್ಟಣ ಹಾಗೂ ಸಿಬ್ಬಂದಿ ವರ್ಗದವರು ಉಪಸ್ಥಿತರಿದ್ದರು.