ಕಲಬುರಗಿ; ಅಂಗನವಾಡಿ ಸಹಾಯಕಿಯರ ಹುದ್ದೆಗಳಿಗೆ ಅರ್ಜಿ ಆಹ್ವಾನ

0
157

ಕಲಬುರಗಿ; 2022-23ನೇ ಸಾಲಿಗೆ ಕಲಬುರಗಿ (ನಗರ) ಶಿಶು ಅಭಿವೃದ್ಧಿ ಯೋಜನೆಯಲ್ಲಿ ಖಾಲಿಯಿರುವ 57 ಅಂಗನವಾಡಿ ಸಹಾಯಕಿಯರ ಹುದ್ದೆಗಳ ಆಯ್ಕೆಗಾಗಿ ಅರ್ಹ ಅಭ್ಯರ್ಥಿಗಳಿಂದ ಆಫ್‍ಲೈನ್ ಮೂಲಕ ಅರ್ಜಿ ಆಹ್ವಾನಿಸಲಾಗಿದೆ ಎಂದು ಕಲಬುರಗಿ (ನಗರ) ಶಿಶು ಅಭಿವೃದ್ಧಿ ಯೋಜನಾಧಿಕಾರಿಗಳು ತಿಳಿಸಿದ್ದಾರೆ.

ಅರ್ಹ ಅಭ್ಯರ್ಥಿಗಳು ನಿಗದಿತ ಅರ್ಜಿ ನಮೂನೆಯನ್ನು ಕಲಬುರಗಿ (ನಗರ) ಶಿಶು ಅಭಿವೃದ್ಧಿ ಯೋಜನಾಧಿಕಾರಿಗಳ ಕಚೇರಿಯಿಂದ ಪಡೆದು ಭರ್ತಿ ಮಾಡಿ 2023ರ ಏಪ್ರಿಲ್ 24ರ ಸಂಜೆ 5.30 ಗಂಟೆಯೊಳಗಾಗಿ ಅರ್ಜಿ ಸಲ್ಲಿಸಬೇಕು.

Contact Your\'s Advertisement; 9902492681

ಹೆಚ್ಚಿನ ಮಾಹಿತಿಗಾಗಿ ಕಲಬುರಗಿ (ನಗರ) ಶಿಶು ಅಭಿವೃದ್ಧಿ ಯೋಜನಾಧಿಕಾರಿಗಳ ಕಚೇರಿಯನ್ನು ಹಾಗೂ ಕಚೇರಿ ದೂರವಾಣಿ ಸಂಖ್ಯೆ 08472-278661 ಗೆ ಕಚೇರಿ ಸಮಯದಲ್ಲಿ ಸಂಪರ್ಕಿಸಲು ಕೋರಲಾಗಿದೆ.

ಜೇವರ್ಗಿ: ಅಂಗನವಾಡಿ ಕಾರ್ಯಕರ್ತೆಯರ ಹಾಗೂ ಸಹಾಯಕಿಯರ ಹುದ್ದೆಗಳಿಗೆ ಅರ್ಜಿ ಆಹ್ವಾನ

ಕಲಬುರಗಿ; ಜೇವರ್ಗಿ ತಾಲೂಕಿನ ವಿವಿಧ ಕಾರಣಗಳಿಂದ ಹಾಗೂ ವಿವಿಧ ಗ್ರಾಮಗಳಲ್ಲಿ ಖಾಲಿಯಿರುವ 30 ಜನ ಅಂಗನವಾಡಿ ಕಾರ್ಯಕರ್ತೆಯರ ಹಾಗೂ 63 ಜನ ಸಹಾಯಕಿಯರ ಹುದ್ದೆಗಳ ಭರ್ತಿಗಾಗಿ ಅರ್ಹ ಅಭ್ಯರ್ಥಿಗಳಿಂದ ಆಫ್‍ಲೈನ್ ಮೂಲಕ ಅರ್ಜಿ ಆಹ್ವಾನಿಸಲಾಗಿದೆ ಎಂದು ಜೇವರ್ಗಿ ಶಿಶು ಅಭಿವೃದ್ಧಿ ಯೋಜನಾಧಿಕಾರಿಗಳು ತಿಳಿಸಿದ್ದಾರೆ.

ಅರ್ಹ ಅಭ್ಯರ್ಥಿಗಳು ಭರ್ತಿ ಮಾಡಿದ ಅರ್ಜಿಯೊಂದಿಗೆ ಪತ್ರಾಂಕಿತ ಅಧಿಕಾರಿಗಳಿಂದ ದೃಢೀಕರಣ ಹೊಂದಿರುವ ಸೂಕ್ತ ದಾಖಲಾತಿಗಳನ್ನು ಲಗತ್ತಿಸಿ 2023ರ ಏಪ್ರಿಲ್ 24 ರೊಳಗಾಗಿ ಜೇವರ್ಗಿ ಶಿಶು ಅಭಿವೃದ್ಧಿ ಯೋಜನಾಧಿಕಾರಿಗಳ ಕಚೇರಿಯಲ್ಲಿ ಅರ್ಜಿ ಸಲ್ಲಿಸಬೇಕು.
ಗ್ರಾಮ ಪಂಚಾಯಿತಿ/ವಾರ್ಡ್ ಸಂಖ್ಯೆವಾರು ಖಾಲಿ ಹುದ್ದೆಗಳ ವಿವರ ಮತ್ತು ಹುದ್ದೆಗಳಿಗೆ ನಿಗದಿಪಡಿಸಿದ ಮೀಸಲಾತಿ ವಿವರ ಹಾಗೂ ಮತ್ತಿತರ ಹೆಚ್ಚಿನ ಮಾಹಿತಿಗಾಗಿ ಜೇವರ್ಗಿ ತಾಲೂಕು ಶಿಶು ಅಭಿವೃದ್ಧಿ ಯೋಜನಾಧಿಕಾರಿಗಳ ಕಚೇರಿಯನ್ನು ಕಚೇರಿ ವೇಳೆಯಲ್ಲಿ ಸಂಪರ್ಕಿಸಲು ಕೋರಲಾಗಿದೆ.

ಕಲಬುರಗಿ ಗ್ರಾಮೀಣ : ಅಂಗನವಾಡಿ ಕಾರ್ಯಕರ್ತೆ ಹಾಗೂ ಸಹಾಯಕಿಯರ ಹುದ್ದೆಗಳಿಗೆ ಅರ್ಜಿ ಆಹ್ವಾನ

ಕಲಬುರಗಿ; ಕಲಬುರಗಿ ಗ್ರಾಮೀಣ ಶಿಶು ಅಭಿವೃದ್ದಿ ಯೋಜನೆಯ ವ್ಯಾಪ್ತಿಯಲ್ಲಿ ಬರುವ ಅಂಗನವಾಡಿ ಕೇಂದ್ರಗಳಲ್ಲಿ ಖಾಲಿಯಿರುವ 18 ಜನ ಅಂಗನವಾಡಿ ಕಾರ್ಯಕರ್ತೆಯರ ಹಾಗೂ 82 ಜನ ಅಂಗನವಾಡಿ ಸಹಾಯಕಿಯರ ಗೌರವ ಸೇವೆಯ ಹುದ್ದೆಗಳಿಗೆ ನೇಮಕ ಮಾಡಲು ಅರ್ಹ ಮಹಿಳಾ ಅಭ್ಯರ್ಥಿಗಳಿಂದ ಆಫ್‍ಲೈನ್ ಮೂಲಕ ಅರ್ಜಿಗಳನ್ನು ಆಹ್ವಾನಿಸಲಾಗಿದೆ ಕಲಬುರಗಿ ಗ್ರಾಮೀಣ ಶಿಶು ಅಭಿವೃದ್ಧಿ ಯೋಜನಾಧಿಕಾರಿಗಳು ತಿಳಿಸಿದ್ದಾರೆ.

ಅರ್ಹ ಅಭ್ಯರ್ಥಿಗಳು ನಿಗದಿತ ಅರ್ಜಿ ನಮೂನೆಯನ್ನು ಕಲಬುರಗಿ ಗ್ರಾಮೀಣ ಶಿಶು ಅಭಿವೃದ್ಧಿ ಯೋಜನಾಧಿಕಾರಿಗಳ ಕಚೇರಿಯಿಂದ ಪಡೆದು ಭರ್ತಿ ಮಾಡಿ ಅವಶ್ಯಕ ದಾಖಲಾತಿಗಳೊಂದಿಗೆ 2023ರ ಏಪ್ರಿಲ್ 24 ರೊಳಗಾಗಿ ಅರ್ಜಿ ಸಲ್ಲಿಸಬೇಕು.

ಮತ್ತಿತರ ಹೆಚ್ಚಿನ ಮಾಹಿತಿಗಾಗಿ ಕಲಬುರಗಿ ಗ್ರಾಮೀಣ ಶಿಶು ಅಭಿವೃದ್ದಿ ಯೋಜನಾಧಿಕಾರಿಗಳ ಕಚೇರಿಯನ್ನು ಕಛೇರಿಯ ವೇಳೆಯಲ್ಲಿ ಹಾಗೂ ಕಚೇರಿ ದೂರವಾಣಿ ಸಂಖ್ಯೆ: 08472-278654 ಗೆ ಸಂಪರ್ಕಿಸಲು ಕೋರಲಾಗಿದೆ.

ಆಳಂದ : ಅಂಗನವಾಡಿ ಕಾರ್ಯಕರ್ತೆ ಹಾಗೂ ಸಹಾಯಕಿಯರ ಹುದ್ದೆಗಳಿಗೆ ಅರ್ಜಿ ಆಹ್ವಾನ

ಕಲಬುರಗಿ; -ಆಳಂದ ಶಿಶು ಅಭಿವೃದ್ದಿ ಯೋಜನೆಯ ವ್ಯಾಪ್ತಿಯಲ್ಲಿ ಬರುವ ಅಂಗನವಾಡಿ ಕೇಂದ್ರಗಳಲ್ಲಿ ಖಾಲಿಯಿರುವ 16 ಅಂಗನವಾಡಿ ಕಾರ್ಯಕರ್ತೆಯರ ಹಾಗೂ 46 ಜನ ಅಂಗನವಾಡಿ ಸಹಾಯಕಿಯರ ಗೌರವ ಸೇವೆಯ ಹುದ್ದೆಗಳಿಗೆ ನೇಮಕ ಮಾಡಲು ಅರ್ಹ ಮಹಿಳಾ ಅಭ್ಯರ್ಥಿಗಳಿಂದ ಆಫ್‍ಲೈನ್ ಮೂಲಕ ಅರ್ಜಿಗಳನ್ನು ಆಹ್ವಾನಿಸಲಾಗಿದೆ ಆಳಂದ ಶಿಶು ಅಭಿವೃದ್ಧಿ ಯೋಜನಾಧಿಕಾರಿಗಳು ತಿಳಿಸಿದ್ದಾರೆ.

ಅರ್ಹ ಮಹಿಳಾ ಅಭ್ಯರ್ಥಿಗಳು ನಿಗದಿತ ಅರ್ಜಿ ನಮೂನೆಯನ್ನು ಆಳಂದ ಶಿಶು ಅಭಿವೃದ್ಧಿ ಯೋಜನಾಧಿಕಾರಿಗಳ ಕಚೇರಿಯಿಂದ ಪಡೆದು ಭರ್ತಿ ಮಾಡಿ ಅವಶ್ಯಕ ದಾಖಲಾತಿಗಳೊಂದಿಗೆ 2023ರ ಏಪ್ರಿಲ್ 24 ರೊಳಗಾಗಿ ಅರ್ಜಿ ಸಲ್ಲಿಸಬೇಕು.

ಮತ್ತಿತರ ಹೆಚ್ಚಿನ ಮಾಹಿತಿಗಾಗಿ ಆಳಂದ ಶಿಶು ಅಭಿವೃದ್ದಿ ಯೋಜನಾಧಿಕಾರಿಗಳ ಕಚೇರಿಯನ್ನು ಕಛೇರಿಯ ವೇಳೆಯಲ್ಲಿ ಹಾಗೂ ಮೊಬೈಲ್ ಸಂಖ್ಯೆ 9844662718 ಗೆ ಸಂಪರ್ಕಿಸಲು ಕೋರಲಾಗಿದೆ.

ಅಫಜಲಪುರ: ಅಂಗನವಾಡಿ ಕಾರ್ಯಕರ್ತೆ ಹಾಗೂ ಸಹಾಯಕಿಯರ ಹುದ್ದೆಗಳಿಗೆ ಅರ್ಜಿ ಆಹ್ವಾನ

ಕಲಬುರಗಿ; ಅಫಜಲಪುರ ತಾಲೂಕಿನಲ್ಲಿ ಹೊಸದಾಗಿ ಮಂಜೂರಾದ ಹಾಗೂ ವಿವಿಧ ಕಾರಣಗಳಿಂದ ತೆರವಾದ 17 ಅಂಗನವಾಡಿ ಕಾರ್ಯಕರ್ತೆಯರ ಹಾಗೂ 64 ಅಂಗನವಾಡಿ ಸಹಾಯಕಿಯರ ಅಯ್ಕೆಗಾಗಿ ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ ಎಂದು ಅಫಜಲಪುರ ಶಿಶು ಅಭಿವೃದ್ಧಿ ಯೋಜನಾಧಿಕಾರಿಗಳು ತಿಳಿಸಿದ್ದಾರೆ.

ಅರ್ಹ ಅಭ್ಯರ್ಥಿಗಳು ನಿಗದಿತ ಅರ್ಜಿ ನಮೂನೆಯನ್ನು ಅಫಜಲಪುರ ಶಿಶು ಅಭಿವೃದ್ಧಿ ಯೋಜನಾಧಿಕಾರಿಗಳ ಕಚೇರಿಯಿಂದ ಪಡೆದು ಭರ್ತಿ ಮಾಡಿ ಅವಶ್ಯಕ ದಾಖಲಾತಿಗಳೊಂದಿಗೆ 2023ರ ಏಪ್ರಿಲ್ 24 ರ ಸಂಜೆ 5.30 ಗಂಟೆಯೊಳಗಾಗಿ ಅರ್ಜಿ ಸಲ್ಲಿಸಬೇಕು.

ಖಾಲಿ ಹುದ್ದೆಗಳ ವಿವರ ಹಾಗೂ ಮತ್ತಿತರ ಮತ್ತಿತರ ಹೆಚ್ಚಿನ ಮಾಹಿತಿಗಾಗಿ ಅಫಜಲಪುರ ಶಿಶು ಅಭಿವೃದ್ದಿ ಯೋಜನಾಧಿಕಾರಿಗಳ ಕಚೇರಿಯನ್ನು ಕಛೇರಿಯ ವೇಳೆಯಲ್ಲಿ ಸಂಪರ್ಕಿಸಲು ಕೋರಲಾಗಿದೆ.

ಪ್ರತ್ಯುತ್ತರ ಬಿಟ್ಟು

Please enter your comment!
Please enter your name here