ಕಲಬುರಗಿ; ಕಲಬುರಗಿ ಲೋಕಾಯುಕ್ತ ವಿಭಾಗದ ಪೊಲೀಸ್ ಅಧೀಕ್ಷಕ ಎ.ಆರ್.ಕರ್ನೂಲ್ ಹಾಗೂ ಪೊಲೀಸ್ ಉಪಾಧೀಕ್ಷಕ ಸಿದ್ದಲಿಂಗಪ್ಪಗೌಡ ಪಾಟೀಲ್ ಅವರು ಇದೇ ಮಾರ್ಚ್ 27 ರಂದು ಬೆಳಿಗ್ಗೆ 11 ರಿಂದ ಮಧ್ಯಾಹ್ನ 1.30 ಗಂಟೆಯವರೆಗೆ ಕಲಬುರಗಿ ನಗರದ ಜಗತ್ ಸರ್ಕಲ್ ಹತ್ತಿರವಿರುವ ಮಹಾನಗರ ಪಾಲಿಕೆಯ ಟೌನ್‍ಹಾಲ್ ಸಭಾಂಗಣದಲ್ಲಿ ಸಾರ್ವಜನಿಕರಿಂದ ಅಹವಾಲು ಸ್ವೀಕರಿಸಲಿದ್ದಾರೆ ಎಂದು ಕರ್ನಾಟಕ ಲೋಕಾಯುಕ್ತ ಪೊಲೀಸ್ ಅಧೀಕ್ಷಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಸರ್ಕಾರಿ ಕಚೇರಿಗಳಲ್ಲಿ ಸಾರ್ವಜನಿಕರ ನ್ಯಾಯ ಸಮ್ಮತ ಕೆಲಸಗಳಿಗೆ ವಿಳಂಬ ಮಾಡುತ್ತಿರುವ ಸರ್ಕಾರಿ ಅಧಿಕಾರಿ/ ಸಿಬ್ಬಂದಿಗಳ ವಿರುದ್ಧ ದೂರು ಸ್ವೀಕರಿಸಲಾಗುತ್ತದೆ. ಸರ್ಕಾರಿ ಕಚೇರಿಗಳಲ್ಲಿ ಜಾಗೃತಿ ಮತ್ತು ಅರಿವು ಮೂಡಿಸಿ, ಭ್ರಷ್ಟ್ರಾಚಾರಕ್ಕೆ ಸಂಬಂಧಿಸಿದ ವಿಷಯಗಳ ಬಗ್ಗೆ ಸಾರ್ವಜನಿಕರಿಂದ ಅರ್ಜಿಗಳನ್ನು ಸ್ವೀಕರಿಸಲಾಗುತ್ತದೆ. ಸಾಧ್ಯವಾದಲ್ಲಿ ಸ್ಥಳದಲ್ಲಿಯೇ ದೂರುದಾರರ ಅಹವಾಲನ್ನು ಬಗೆಹರಿಸಲಾಗುವುದು. ಸಾರ್ವಜನಿಕರು ಕುಂದುಕೊರತೆಗಳಿದ್ದಲ್ಲಿ ಮೇಲ್ಕಂಡ ದಿನದಂದು ನಿಗದಿಪಡಿಸಿದ ಸಮಯಕ್ಕೆ ಹಾಜರಾಗಿ ತಮ್ಮ ಅರ್ಜಿಗಳನ್ನು ಸಲ್ಲಿಸಬಹುದಾಗಿದೆ.
ಹೆಚ್ಚಿನ ಮಾಹಿತಿಗಾಗಿ ಪೊಲೀಸ್ ಅಧೀಕ್ಷಕರು, ಕರ್ನಾಟಕ ಲೋಕಾಯುಕ್ತ ಕಚೇರಿ, ಐವಾನ್ ಶಾಹಿ, ಕಂಪೌಂಡ್, ಕಲಬುರಗಿ-585102 ಕಚೇರಿಯನ್ನು ಹಾಗೂ ದೂರವಾಣಿ ಸಂಖ್ಯೆ-08472-295364ಗೆ ಸಂಪರ್ಕಿಸಲು ಕೋರಲಾಗಿದೆ.
ಕಲಬುರಗಿ: ಕಲಬುರಗಿ ದಕ್ಷಿಣ ಮತಕ್ಷೇತ್ರದ ಶಾಸಕ ಅಲ್ಲಮಪ್ರಭು ಪಾಟೀಲ ಅವರು ಶನಿವಾರ ಸಂಜೆ ಕ್ಷೇತ್ರದ ಭೀಮಳ್ಳಿ ಗ್ರಾಮದ ರೈತರ ಹೊಲಗಳಿಗೆ…
ಕಲಬುರಗಿ: ಕಷ್ಟಗಳು ಬಂದಾಗ ಕುಗ್ಗದೆ, ಆ ಕಷ್ಟಗಳನ್ನು ಸವಾಲಾಗಿ ಸ್ವೀಕರಿಸಿ ಮೇಲೇಳಬೇಕು ಎಂದು ತಾಜ್ ನಗರದ ಆರೋಗ್ಯ ಕೇಂದ್ರದ ಹಿರಿಯ…
ಪರೋಪಕಾರ ಸೇವೆಯಿಂದ ಆತ್ಮತೃಪ್ತಿ: ಹಿರೇಮಠ ಕಲಬುರಗಿ: ನಗರ ಹೊರವಲಯದ ಸೈಯದ್ ಚಿಂಚೋಳಿ ರಸ್ತೆಯ ಬಳಿ ಇರುವ ಕೆವಿಪಿ ದಣ್ಣೂರ ಪಿಯು…
ವಾಡಿ (ಕಲಬುರಗಿ): ಪುರಸಭೆ ಮಾಜಿ ಸದಸ್ಯ ಹಾಗೂ ಕಾಂಗ್ರೆಸ್ ಪಕ್ಷದ ಯುವ ಮುಖಂಡ ಸೂರ್ಯಕಾಂತ ರದ್ದೇವಾಡಿ ಅವರು ಶುಕ್ರವಾರ…
ಕಲಬುರಗಿ: ಸಂಡೂರ, ಶಿಗ್ಗಾವಿ ಹಾಗೂ ಚನ್ನಪಟ್ಟಣ ಸೇರಿದಂತೆ ಮೂರು ವಿಧಾಸಭಾ ಕ್ಷೇತ್ರದ ಉಪ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷದ ಅಭ್ಯರ್ಥಿಗಳು ಭರ್ಜರಿ…
ಚಿಂಚೋಳಿ: ಕಾನೂನು ತೊಡಕಿನಿಂದ ಸ್ಥಗಿತಗೊಂಡ ಸಿದ್ದಸಿರಿ ಎಥೆನಾಲ್ ಕಾರ್ಖಾನೆ ಪ್ರಾರಂಭಕ್ಕೆ ಕರ್ನಾಟಕ ಮಾಲಿನ್ಯ ನಿಯಂತ್ರಣ ಮಂಡಳಿ ಅನುಮತಿ ನೀಡಬೇಕೆಂದು ಒತ್ತಾಯಿಸಿ…