371J ಪರಿಣಾಮಕಾರಿ ಅನುಷ್ಠಾನ, ಕಲ್ಯಾಣದ ಅಭಿವೃದ್ಧಿಯ ಮಹತ್ವದ ಸಭೆ 26ಕ್ಕೆ

0
34

ಕಲಬುರಗಿ : ಹಿಂದುಳಿದ ಕಲ್ಯಾಣ ಕರ್ನಾಟಕ ಪ್ರದೇಶಕ್ಕೆ ಜಾರಿಯಾಗಿರುವ ಸಂವಿಧಾನದ 371ನೇ(ಜೆ) ಕಲಂ ಪರಿಣಾಮಕಾರಿ ಅನುಷ್ಠಾನದ ಬಗ್ಗೆ ಮತ್ತು ಕಲ್ಯಾಣ ಕರ್ನಾಟಕ ಪ್ರದೇಶದ ರಚನಾತ್ಮಕ ಸರ್ವಾಂಗೀಣ ಅಭಿವೃದ್ಧಿಯ ಕುರಿತು ಬರುವ ಚುನಾವಣೆಯಲ್ಲಿ ಎಲ್ಲಾ ರಾಜಕೀಯ ಪಕ್ಷಗಳು ತಮ್ಮ ಪಕ್ಷದ ಪ್ರಣಾಳಿಕೆಯಲ್ಲಿ ಸೇರಿಸಿಕೊಳ್ಳಬೇಕಾಗಿ ವಿಷೇಶ ಸಭೆ ಆಯೋಜಿಸಲಾಗಿದೆ ಎಂದು ಕಲ್ಯಾಣ ಕರ್ನಾಟಕ ಹೋರಾಟ ಸಮಿತಿಯ ಅಧ್ಯಕ್ಷರಾದ ಲಕ್ಷಣ ದಸ್ತಿ ತಿಳಿಸಿದ್ದಾರೆ.

26ರಂದು ರವಿವಾರ ಮುಂಜಾನೆ 11.30 ಗಂಟೆಗೆ ಹಿಂದಿ ಪ್ರಚಾರ ಸಭಾಂಗಣದಲ್ಲಿ ಸಮಿತಿಯ ಕ್ರೀಯಾ ಸದಸ್ಯರ ಮತ್ತು ಅಭಿವೃದ್ಧಿಪರ ಚಿಂತಕರ ಸಭೆಯನ್ನು ಕಲ್ಯಾಣ ಕರ್ನಾಟಕ ಹೋರಾಟ ಸಮಿತಿಯ ಅಧ್ಯಕ್ಷರಾದ ಲಕ್ಷಣ ದಸ್ತಿಯವರ ಅಧ್ಯಕ್ಷತೆಯಲ್ಲಿ ಸಭೆಯನ್ನು ನಿಯೋಜಿಸಲಾಗಿದೆ ಎಂದು ತಿಳಿಸಿದ್ದಾರೆ.

Contact Your\'s Advertisement; 9902492681

ಈ ಸಭೆಯಲ್ಲಿ 37ನೇ(ಜೆ) ಕಲಂ ಅಡಿಯಲ್ಲಿ ನೇಮಕಾತಿ ಮತ್ತು ಮುಂಬಡ್ತಿಗಳಲ್ಲಿ ಆಗುತ್ತಿರುವ ಅನ್ಯಾಯ ಮತ್ತು ತಾರತಮ್ಯ ನಿವಾರಿಸಲು, ಪ್ರತ್ಯೇಕ ಸಚಿವಾಲಯ ಸೇರಿದಂತೆ, ಕಲ್ಯಾಣ ಕರ್ನಾಟಕದ ನೀರಾವರಿ, ಕೈಗಾರಿಕೆ, ರಸ್ತೆ ಸಾರಿಗೆ, ರೈಲ್ವೆ ಕ್ಷೇತ್ರ, ಶಿಕ್ಷಣ ಮುಂತಾಗಿ ಎಲ್ಲಾ ಕ್ಷೇತ್ರದ ರಚನಾತ್ಮಕ ಅಭಿವೃದ್ಧಿಯ ವಿಷಯಗಳ ಬಗ್ಗೆ ಚರ್ಚಿಸಿ ಎಲ್ಲರ ಸಲಹೆ ಸೂಚನೆಗಳನ್ನು ಪಡೆದು ಮಹತ್ವದ ನಿರ್ಣಯಗಳನ್ನು ಕೈಗೊಳ್ಳಲಾಗುವುದು. ಈ ಮಹತ್ವದ ಸಭೆಗೆ ಸಮಿತಿಯ ಎಲ್ಲಾ ಕ್ರೀಯಾ ಸದಸ್ಯರು ಸರಿಯಾದ ಸಮಯಕ್ಕೆ ಹಾಜರಾಗಲು ಪ್ರಕಟಣೆಯಲ್ಲಿ ಕೋರಿದ್ದಾರೆ.

ಪ್ರತ್ಯುತ್ತರ ಬಿಟ್ಟು

Please enter your comment!
Please enter your name here