ಕಲಬುರಗಿ: ನಮ್ಮ ಕಾಂಗ್ರೆಸ್ ಪಕ್ಷದ ಸಂಸದರು, ವಿಪಕ್ಷ ನಾಯಕರಾದ Rahul Gandhi ಅವರ ಸತ್ಯವಾದ ಹೇಳಿಕೆಯನ್ನು ಸಹಿಸಲಾರದೆ ಕೇಂದ್ರ ಬಿಜೆಪಿ ಸರ್ಕಾರ ಅವರನ್ನು ಅನರ್ಹಗೊಳಿಸುವ ಮೂಲಕ ತಮ್ಮ ಹೇಡಿತನವನ್ನು ಪ್ರದರ್ಶಿಸಿದೆ ಎಂದು ಮಾಜಿ ಸಚಿವ ಶಾಸಕ ಪ್ರಿಯಾಂಕ ಖರ್ಗೆ ಅಸಮಾಧಾನ ವ್ಯಕ್ತಪಡಿಸಿದ್ದಾರೆ.
ದೀಪ ಆರುವ ಮುನ್ನ ಜೋರಾಗಿ ಉರಿಯುವ ಹಾಗೆ ಬಿಜೆಪಿ ಪಕ್ಷ ತನ್ನ ಅಂತ್ಯವನ್ನು ತಾನೇ ಸಿದ್ಧಪಡಿಸಿಕೊಳ್ಳುತ್ತಿದೆ. ಬಿಜೆಪಿ ಸರ್ಕಾರದ ಇಂತಹ ಬೆದರಿಕೆಗಳಿಗೆ ಭಯಪಡುವುದಕ್ಕೆ, ಕ್ಷಮೆ ಕೇಳುವುದಕ್ಕೆ, ನಾವು ಸಾವರ್ಕರ ಅನುಯಾಯಿಗಳಲ್ಲ ಮಹಾತ್ಮಾ ಗಾಂಧಿ ಅವರ ಅನುಯಾಯಿಗಳು ಎಂದು ಚಾಟಿ ಬಿಸಿದ್ದಾರೆ.
ರಾಹುಲ್ ಗಾಂಧಿ ಅವರನ್ನು ನೇರವಾಗಿ ಎದುರಿಸಲು ಸಾಧ್ಯವಾಗದ ಸಂದರ್ಭದಲ್ಲಿ ಇಂತಹ ಅನ್ಯಮಾರ್ಗಗಳ ಮೂಲಕ ಕುಗ್ಗಿಸಬೇಕು ಎಂದು ಹೊರಟಿರುವುದು ನಾಚಿಕೆಗೇಡು.ಕಾಂಗ್ರೆಸ್ ಪಕ್ಷ ಅಂದು ಸ್ವಾತಂತ್ರ್ಯಕ್ಕಾಗಿ ಬ್ರಿಟಿಷರ ವಿರುದ್ಧ ಹೋರಾಟ ಮಾಡಿತ್ತು, ಇಂದು ಸಂವಿಧಾನವನ್ನು ಉಳಿಸುವುದಕ್ಕಾಗಿ ಬಿಜೆಪಿ ವಿರುದ್ಧ ಹೋರಾಟ ಮಾಡುವ ಸಂದರ್ಭ ಬಂದಿದೆ ಎಂದು ಕರೆ ನೀಡಿದ್ದಾರೆ.
ವಾಡಿ (ಕಲಬುರಗಿ): ಪುರಸಭೆ ಮಾಜಿ ಸದಸ್ಯ ಹಾಗೂ ಕಾಂಗ್ರೆಸ್ ಪಕ್ಷದ ಯುವ ಮುಖಂಡ ಸೂರ್ಯಕಾಂತ ರದ್ದೇವಾಡಿ ಅವರು ಶುಕ್ರವಾರ…
ಕಲಬುರಗಿ: ಸಂಡೂರ, ಶಿಗ್ಗಾವಿ ಹಾಗೂ ಚನ್ನಪಟ್ಟಣ ಸೇರಿದಂತೆ ಮೂರು ವಿಧಾಸಭಾ ಕ್ಷೇತ್ರದ ಉಪ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷದ ಅಭ್ಯರ್ಥಿಗಳು ಭರ್ಜರಿ…
ಚಿಂಚೋಳಿ: ಕಾನೂನು ತೊಡಕಿನಿಂದ ಸ್ಥಗಿತಗೊಂಡ ಸಿದ್ದಸಿರಿ ಎಥೆನಾಲ್ ಕಾರ್ಖಾನೆ ಪ್ರಾರಂಭಕ್ಕೆ ಕರ್ನಾಟಕ ಮಾಲಿನ್ಯ ನಿಯಂತ್ರಣ ಮಂಡಳಿ ಅನುಮತಿ ನೀಡಬೇಕೆಂದು ಒತ್ತಾಯಿಸಿ…
ಚಿಂಚೋಳಿ: ಸಿದ್ದಶ್ರೀ ಕಾರ್ಖಾನೆ ಪ್ರಾರಂಭ ಮಾಡಲು ರೈತರು ಹಗಲು ರಾತ್ರಿ ಎನ್ನದೆ ಬಸವೇಶ್ವರ ಉತ್ತರ ಬಳಿ ಧರಣಿಯಲ್ಲಿ ಹೋರಾಟ ಮಾಡುತ್ತಿದ್ದು.…
ಕಲಬುರಗಿ: ನವೆಂಬರ್ 29 ರಿಂದ 2 ಡಿಸೇಂಬರ್ ವರೆಗೆ ತಮಿಳುನಾಡಿನ ಅಲಗಪ್ಪ ವಿಶ್ವವಿದ್ಯಾಲಯ ಕರೈಕುಡಿಯಲ್ಲಿ ನಡೆಯುವ ದಕ್ಷಿಣ ಭಾರತ ಅಂತರ…
ಕಲಬುರಗಿ: ನಗರದ ವಾರ್ಡ ನಂ.51.ರ ಜೇವರ್ಗಿ ಕಾಲೋನಿ ವಾಟರ್ ಟ್ಯಾಂಕ್ ಹತ್ತಿರದ ಉದ್ಯವನದಲ್ಲಿ ಜಿಲ್ಲಾ ಉಸ್ತುವಾರಿ ಸಚಿವ ಪ್ರಿಯಾಂಕ ಖರ್ಗೆ…