ಸುರಪುರ: ಕನ್ನೆಳ್ಳಿ ಗ್ರಾಮದಲ್ಲಿ ಇದೇ ಮಾರ್ಚ್ 11 ರಂದು ನಡೆದ ಗಲಾಟೆಯಲ್ಲಿ ದಲಿತ ಯುವಕನ ಮೇಲೆ ಹಲ್ಲೆ ನಡೆಸಿದವರ ವಿರುದ್ಧ ಪ್ರಕರಣ ದಾಖಲಿಸುವಂತೆ ಕರ್ನಾಟಕ ರಾಜ್ಯ ದಲಿತ ಸಂಘರ್ಷ ಸಮಿತಿ ಕ್ರಾಂತಿಕಾರಿ ಬಣದ ರಾಜ್ಯ ಸಂಘಟನಾ ಸಂಚಾಲಕ ಮಲ್ಲಿಕಾರ್ಜುನ ಕ್ರಾಂತಿ ಆಗ್ರಹಿಸಿದರು.
ನಗರದ ಪೊಲೀಸ್ ಠಾಣೆ ಮುಂದೆ ಪ್ರತಿಭಟನೆ ನಡೆಸಿ ಮಾತನಾಡಿ,ಮಾರ್ಚ್ 11 ರಂದು ಕನ್ನೆಳ್ಳಿ ಗ್ರಾಮದಲ್ಲಿ ಡಾ:ಬಾಬಾ ಸಾಹೇಬ್ ಅಂಬೇಡ್ಕರ್ ಹಾಗೂ ಡಾ:ಬಾಬು ಜಗಜೀನರಾಮ್ ವೃತ್ತ ಉದ್ಘಾಟನೆ ಕಾರ್ಯಕ್ರಮಕ್ಕೆ ಬಂದಿದ್ದ ನಗನೂರ ಗ್ರಾಮದ ಶರಣಪ್ಪ ಹಂಗರಗಿ ಎನ್ನುವ ಯುವಕನ ಮೇಲೆ ಮೇಲ್ವರ್ಗದವರು ಮಾರಣಾಂತಿಕ ಹಲ್ಲೆ ನಡೆಸಿದ್ದು,ಹಲ್ಲೆಗೊಳಗಾದ ಯುವಕ ಈಗ ಕಲಬುರ್ಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾನೆ.ಆದರೆ ಘಟನೆ ನಡೆದು 15 ದಿನಗಳಾದರು ಈವರೆಗೆ ಪ್ರಕರಣ ದಾಖಲಿಸದ ಪಿಐ ವಿರುದ್ಧ ಕ್ರಮ ಕೈಗೊಳ್ಳುವಂತೆ ಆಗ್ರಹಿಸಿದರು.ಅಲ್ಲದೆ ಕೂಡಲೇ ಯುವಕ ಶರಣಪ್ಪನ ಮೇಲೆ ಹಲ್ಲೆ ನಡೆಸಿದವರ ವಿರುದ್ಧ ಜಾತಿ ನಿಂದನೆ ಹಾಗೂ ಕೊಲೆ ಯತ್ನ ಕೇಸ್ ದಾಖಲಿಸುವಂತೆ ಆಗ್ರಹಿಸಿದರು. ನಮ್ಮ ಬೇಡಿಕೆಯನ್ನು ಈಡೇರಿಸದಿದ್ದಲ್ಲಿ ಏಪ್ರಿಲ್ 11 ರಂದು ಎಸ್ಪಿ ಕಚೇರಿಗೆ ಮುತ್ತಿಗೆ ಹಾಕಿ ಪ್ರತಿಭಟನೆ ನಡೆಸಲಾಗುವುದು ಎಂದು ಎಚ್ಚರಿಸಿದರು.
ನಂತರ ಡಿವೈಎಸ್ಪಿ ಡಾ:ಮಂಜುನಾಥ ಟಿ ಅವರಿಗೆ ಮನವಿ ಸಲ್ಲಿಸಿದರು.ಈ ಸಂದರ್ಭದಲ್ಲಿ ಮುಖಂಡರಾದ ಮಾನು ಗುರಿಕಾರ,ಡಾ:ಮಲ್ಲಿಕಾರ್ಜುನ ಆಶಿನಾಳ,ಮಲ್ಲಿಕಾರ್ಜುನ ಕುರಕುಂದಿ,ಅಜೀಜಸಾಬ್ ಐಕೂರ,ಮಾನಪ್ಪ ಬಿಜಾಸಪುರ,ಮಹಾದೇವಪ್ಪ ಬಿಜಾಸಪುರ,ಮಾನಪ್ಪ ಕರಡಕಲ್,ಹಣಮಂತ ಬಾಂಬೆ,ಜಟ್ಟೆಪ್ಪ ನಾಗರಾಳ,ನಿಂಗಪ್ಪ ಕಟಗಿ ಶಹಾಪುರ ಸೇರಿದಂತೆ ಅನೇಕರು ಭಾಗವಹಿಸಿದ್ದರು.
ಕಲಬುರಗಿ: ಕಾಂಗ್ರೆಸ್ ಪಕ್ಷದ ಅಂಗ ಸಂಖ್ಯೆ ಸೇವಾದಳ ಯಂಗ್ ಬ್ರಿಗೇಡ್ ಸದಸ್ಯತ್ವ ಅಭಿಯಾನ ನ.20ರಿಂದ ರಾಜ್ಯವ್ಯಾಪಿ ಆರಂಭ ಮಾಡಲಾಗಿದ್ದು, ಆಸಕ್ತರು…
ಕಲಬುರಗಿ: ಜೀವನದಲ್ಲಿ ಹತ್ತನೇ ಮತ್ತು ಪಿಯುಸಿ ಬಹಳ ಮಹತ್ವದ ಘಟ್ಟಗಳು. ಇವೆರಡು ನಮ್ಮ ಭವಿಷ್ಯವನ್ನು ನಿರ್ಧರಿಸುತ್ತವೆ. ವಿದ್ಯಾರ್ಥಿಗಳು ಅಚಲವಾದ ಆತ್ಮವಿಶ್ವಾಸದಿಂದ…
ಸೇಡಂ : ತಮ್ಮ ಬೌದ್ಧಿಕ ವಿಕಾಸದಲ್ಲಿಯೇ ಮಹಿಳೆಯರ ಅಸ್ತಿತ್ವವಿದೆ ಎಂದು ಕೇಂದ್ರ ಸಾಹಿತ್ಯ ಅಕಾಡೆಮಿ ಸದಸ್ಯ ಡಾ.ಬಸವರಾಜ ಸಾದರ ಹೇಳಿದರು.…
ಕಲಬುರಗಿ: ಅಫಜಲಪುರ ತಾಲೂಕಿನ ಸೊನ್ನ ಗ್ರಾಮದ ನಿವಾಸಿ ಆನಂದಪ್ಪ ಶರಣಪ್ಪ ಉಮ್ಮನಗೋಳ್(೮೦) ಅವರು ಸೋಮವಾರ ಬೆಳಗ್ಗೆ ವಯೋಸಹಜವಾಗಿ ನಿಧನರಾದರು. ಮೃತರು…
ಕಲಬುರಗಿ: ಸಂಘಸಂಸ್ಥೆಗಳು ಸಾದಕರನ್ನು ಗುರುತಿಸಿ ಪ್ರಶಸ್ತಿ ಪುರಸ್ಕಾರಗಳನ್ನು ನೀಡುವ ಮುಖಾಂತರಾ ಅವರ ಜವಾಬ್ದಾರಿ ಹೆಚ್ಚಿಸುವುದರಜೋತೆಯಲ್ಲಿ ಸಾಮಾಜಿಕ ಕೆಲಸಗಳನ್ನು ಮಾಡುತ್ತಿರುವುದು ಸಮಾಜಕ್ಕೆ…
ಕಲಬುರಗಿ; ಹೈದ್ರಾಬಾದ್- ಕರ್ನಾಟಕ ಶಿಕ್ಷಣ ಸಂಸ್ಥೆಯ PDACE ಸಭಾಂಗಣದಲ್ಲಿ ನಡೆದ ಕಲ್ಯಾಣ ಕರ್ನಾಟಕ startup conclave ಇಂದು ದಕ್ಷಣ ಶಾಸಕ…