ಕಲಬುರಗಿ: ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ನೇತೃತ್ವದಲ್ಲಿ ರಾಜ್ಯ ಸರ್ಕಾರ ಹಲವು ವರ್ಷಗಳಿಂದ ನೆನೆಗುದಿಗೆ ಬಿದ್ದಿದ್ದ ಎಸ್ಸಿ ಜಾತಿಗೆ ಒಳ ಮೀಸಲಾತಿಯನ್ನು ಪ್ರಕಟಿಸಿರುವುದನ್ನು ಮಹಾಗಾಂವ ಬಿಜೆಪಿ ಮುಖಂಡ ಮಲ್ಲಿಕಾರ್ಜುನ ಮರತೂರಕರ್ ಅವರು ಸ್ವಾಗತಿಸಿದರು.
ಈ ಕುರಿತು ಪತ್ರಿಕಾ ಪ್ರಕಟಣೆ ನೀಡಿದ ಅವರು, ಪರಿಶಿಷ್ಟ ಜಾತಿಗಳಿಗೆ ಒಳ ಮೀಸಲಾತಿ ನೀಡುವುದು ಸವಾಲಿನ ಕೆಲಸವಾಗಿತ್ತು. ಸದಾಶಿವ ಆಯೋಗದ ವರದಿಯನ್ನು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ನೇತೃತ್ವದ ಸಚಿವ ಸಂಪುಟವು ಸಮರ್ಥವಾಗಿ ಜಾರಿ ಮಾಡಿದ್ದು, ಎಡಗೈ ಗೆ ಶೇ. 6ರಷ್ಟು , ಬಲಗೈ ಗೆ ಶೇಕಡಾ 5.5 , ಮತ್ತು ಅಸ್ಪಶ್ಯರಿಗೆ ಶೇ. 4.5 ಹಾಗೂ ಇತರರಿಗೆ ಶೇಕಡಾ 1ರಷ್ಟು ಮೀಸಲು ಜಾರಿ ಮಾಡಿರುವುದು ಶ್ಲಾಘನೀಯ ಎಂದರು.
ಲಿಂಗಾಯತ ಸಮುದಾಯಕ್ಕೆ ಶೇಕಡಾ 7 ರಷ್ಟು ಮೀಸಲಾತಿ ನೀಡುವ ಮೂಲಕ ಈ ಸಮಾಜವು ಎರಡು ದಶಕಗಳಿಂದ ನಡೆಸುತ್ತಿದ್ದ ಹೋರಾಟಕ್ಕೆ ಸರ್ಕಾರ ತಾರ್ತಿಕ ಅಂತ್ಯವನ್ನು ನೀಡಿದೆ.ಶೈಕ್ಷಣಿಕ, ಸಾಮಾಜಿಕ ಮತ್ತು ಉದ್ಯೋಗ ಕ್ಷೇತ್ರದಲ್ಲಿ ಪ್ರಗತಿ ಸಾಧಿಸಲು ಮೀಸಲಾತಿ ಸೌಲಭ್ಯವು ಸಾಕಷ್ಟು ಅನುಕೂಲವಾಗಲಿದೆ ಎಂದು ಅವರು ಅಭಿಪ್ರಾಯಪಟ್ಟರು.
ಕಲಬುರಗಿ: ಜೀವನದಲ್ಲಿ ಹತ್ತನೇ ಮತ್ತು ಪಿಯುಸಿ ಬಹಳ ಮಹತ್ವದ ಘಟ್ಟಗಳು. ಇವೆರಡು ನಮ್ಮ ಭವಿಷ್ಯವನ್ನು ನಿರ್ಧರಿಸುತ್ತವೆ. ವಿದ್ಯಾರ್ಥಿಗಳು ಅಚಲವಾದ ಆತ್ಮವಿಶ್ವಾಸದಿಂದ…
ಸೇಡಂ : ತಮ್ಮ ಬೌದ್ಧಿಕ ವಿಕಾಸದಲ್ಲಿಯೇ ಮಹಿಳೆಯರ ಅಸ್ತಿತ್ವವಿದೆ ಎಂದು ಕೇಂದ್ರ ಸಾಹಿತ್ಯ ಅಕಾಡೆಮಿ ಸದಸ್ಯ ಡಾ.ಬಸವರಾಜ ಸಾದರ ಹೇಳಿದರು.…
ಕಲಬುರಗಿ: ಅಫಜಲಪುರ ತಾಲೂಕಿನ ಸೊನ್ನ ಗ್ರಾಮದ ನಿವಾಸಿ ಆನಂದಪ್ಪ ಶರಣಪ್ಪ ಉಮ್ಮನಗೋಳ್(೮೦) ಅವರು ಸೋಮವಾರ ಬೆಳಗ್ಗೆ ವಯೋಸಹಜವಾಗಿ ನಿಧನರಾದರು. ಮೃತರು…
ಕಲಬುರಗಿ: ಸಂಘಸಂಸ್ಥೆಗಳು ಸಾದಕರನ್ನು ಗುರುತಿಸಿ ಪ್ರಶಸ್ತಿ ಪುರಸ್ಕಾರಗಳನ್ನು ನೀಡುವ ಮುಖಾಂತರಾ ಅವರ ಜವಾಬ್ದಾರಿ ಹೆಚ್ಚಿಸುವುದರಜೋತೆಯಲ್ಲಿ ಸಾಮಾಜಿಕ ಕೆಲಸಗಳನ್ನು ಮಾಡುತ್ತಿರುವುದು ಸಮಾಜಕ್ಕೆ…
ಕಲಬುರಗಿ; ಹೈದ್ರಾಬಾದ್- ಕರ್ನಾಟಕ ಶಿಕ್ಷಣ ಸಂಸ್ಥೆಯ PDACE ಸಭಾಂಗಣದಲ್ಲಿ ನಡೆದ ಕಲ್ಯಾಣ ಕರ್ನಾಟಕ startup conclave ಇಂದು ದಕ್ಷಣ ಶಾಸಕ…
ಕಲಬುರಗಿ : ಒತ್ತಡದ ಬದುಕಿನಲ್ಲಿ ಸಂಗೀತ ಆಲಿಸುವುದರಿಂದ ಮಾನಸಿಕ ನೆಮ್ಮದಿ, ಶಾಂತಿ ದೊರೆಯಲು ಸಾಧ್ಯವಿದೆ. ಅನೇಕ ಜನ ಸಂಗೀತ ಕಲಾವಿದರಿಂದು…