ಮುಸ್ಲಿಮರ ಮೀಸಲಾತಿ ರದ್ದು: ನಿರ್ಣಯ ಹಿಂಪಡೆಯಲು ಡಾ.ರಶೀದ್ ಆಗ್ರಹ

0
23

ಶಹಾಬಾದ: ಅಲ್ಪಸಂಖ್ಯಾತ ಮುಸ್ಲಿಂ ಸಮುದಾಯಕ್ಕೆ ಇದ್ದ ಮೀಸಲಾತಿಯನ್ನು ರದ್ದು ಮಾಡಿದ ನಿರ್ಣಯವನ್ನು ರಾಜ್ಯ ಸರ್ಕಾರ ಕೂಡಲೇ ಹಿಂಪಡೆಯಬೇಕು ಎಂದು ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಡಾ.ರಶೀದ್ ಮರ್ಚಂಟ ಆಗ್ರಹಿಸಿದ್ದಾರೆ.

ಈ ಕುರಿತು ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಮುಸ್ಲಿಮರಿಗೆ ಪ್ರವರ್ಗ 2ಬಿ ಅಡಿಯಲ್ಲಿದ್ದ ಶೇ.4 ಮೀಸಲಾತಿಯನ್ನು ಕಿತ್ತು ಇನ್ನೊಂದು ಸಮುದಾಯಕ್ಕೆ ಹಂಚುವ ಮೂಲಕ ಸಮುದಾಯಗಳ ನಡುವೆ ದ್ವೇಷದ ಬಿಜಾ ಬಿತ್ತಿ ಮತ ಗಳಿಸುವ ಹುನ್ನಾರ ಮಾಡಿದೆ, ಇದು ಸರಕಾರ ಅಸಂವಿಧಾನಿಕವಾಗಿದೆ ಮತ್ತು ಮುಸ್ಲಿಮರ ವಿರುದ್ಧ ಸರಕಾರ ನಡೆಸುವ ಷಡ್ಯಂತ್ರ ಇದಾಗಿದ್ದು, ಬಿಜೆಪಿ ತನ್ನ ಕೋಮುವಾದಿತನವನ್ನು ಪದೇ ಪದೇ ಪ್ರದರ್ಶಿಸುತ್ತಲೇ ಇದೆ. ಸಂವಿಧಾನ ಮೂಲ ಆಶಯವಾದ ಸಮಾನತೆಯನ್ನು ತೋರುವಲ್ಲಿ ಸರಕಾರ ವಿಫಲವಾಗಿದೆ.

Contact Your\'s Advertisement; 9902492681

ಜಾತ್ಯಾತೀತ ನೆಲೆಗಟ್ಟಿನ ಮೌಲ್ಯಗಳನ್ನು ಗಾಳಿಗೆ ತೂರಿ ಅಲ್ಪಸಂಖ್ಯಾತರ ಹಕ್ಕನ್ನು ಕಿತ್ತುಕೊಳ್ಳುವ ಮಟ್ಟಕ್ಕೆ ಇಳಿದಿರುವುದು ಅತ್ಯಂತ ಕೀಳು ಮಟ್ಟದ ರಾಜಕಾರಣ. ಎಲ್ಲಾ ಸಮುದಾಯದ ಹಿತ ಕಾಯುವ ಮುಖ್ಯಮಂತ್ರಿ ಎನ್ನುವ ಅಭಿಪ್ರಾಯಕ್ಕೆ ಬಸವರಾಜ ಬೊಮ್ಮಾಯಿ ತಿಲಾಂಜಲಿ ಇಟ್ಟಿದ್ದಾರೆ. ಕೂಡಲೇ ಅಲ್ಪಸಂಖ್ಯಾತರ ಹಕ್ಕನ್ನು ಕಿತ್ತುಕೊಳ್ಳುವ ನಿರ್ಧಾರ ಕೈಬಿಡಬೇಕು. ಮುಸ್ಲಿಮರ 2ಬಿ ಮೀಸಲಾತಿ ಎಥಾವತ್ತಾಗಿ ಮುಂದುವರೆಸಬೇಕು ಎಂದು ಆಗ್ರಹಿಸಿದ್ದಾರೆ.

ಪ್ರತ್ಯುತ್ತರ ಬಿಟ್ಟು

Please enter your comment!
Please enter your name here