ಕಲಬುರಗಿ: ನಗರದ ಅಂದ ಬಾಲಕರ ವಸತಿ ಶಾಲೆಯ ಆವರಣದಲ್ಲಿ ಬಿ.ಆರ್.ಅಂಬೇಡ್ಕರ ಅಭಿವೃದ್ಧಿ ನಿಗಮ, ಕರ್ನಾಟಕ ಆದಿ ಜಾಂಭವ ಅಭಿವೃದ್ಧಿ ನಿಗಮ, ಕರ್ನಾಟಕ ತಾಂಡಾ ಅಭಿವೃದ್ಧಿ ನಿಗಮ ಹಾಗೂ ಕರ್ನಾಟಕ ಭೋವಿ ಅಭಿವೃದ್ಧಿ ನಿಗಮ, ಕರ್ನಾಟಕ ಮಹರ್ಷಿ ವಾಲ್ಮೀಕ ನಿಗಮ ಮತ್ತು ಡಿಎಂಎಸ್ ಯೋಜನೆ ಅಡಿಯಲ್ಲಿ ಗ್ರಾಮೀಣ ವಿಧಾನಸಭಾ ಮತಕ್ಷೇತ್ರದ 2022-23 ನೇ ಸಾಲಿನಲ್ಲಿ ಆಯ್ಕೆಯಾದ ಸುಮಾರು 150 ಫಲಾನುಭವಿಗಳಿಗೆ ದ್ವಿಚಕ್ರ ಹಾಗೂ ತ್ರಿಚಕ್ರ ವಾಹನಗಳನ್ನು ಶಾಸಕ ಬಸವರಾಜ ಮತ್ತಿಮಡು ಅವರು ವಿತರಿಸಿದರು.
ಈ ಸಂದರ್ಭದಲ್ಲಿ ಬಿಜೆಪಿ ಶಹಾಬಾದ ಮಂಡಲ ಅಧ್ಯಕ್ಷ ಅಣವೀರ ಒಂಗಿನ ಶೆಟ್ಟಿ, ಗ್ರಾಮೀಣ ಮಂಡಲ ಅಧ್ಯಕ್ಷ ಸಂಗಮೇಶ ವಾಲಿ, ರೈತ ಮೋರ್ಚಾ ಅಧ್ಯಕ್ಷ ಬಸವರಾಜ ಪಾಟೀಲ, ಮುಖಂಡರಾದ ಸತೀಶ ಸಾಹುಕಾರ, ಪ್ರಭು ಕಾಳನೂರ, ರಾಜಕುಮಾರ ಮಠಾಳೆ, ನಾಗರಾಜ ಕಲ್ಲಾ ಸೇರಿದಂತೆ ಇತರರು ಇದ್ದರು.