ಹೈದರಾಬಾದ್ ಕರ್ನಾಟಕ

ಲೋಕಸಭಾ ಚುನಾವಣೆ: ಮತಗಟ್ಟೆ ಕೇಂದ್ರಗಳ ಸುತ್ತಲೂ ನಿರ್ಬಂಧಿತ ಪ್ರದೇಶ

ಕಲಬುರಗಿ: ಗುಲಬರ್ಗಾ (ಮೀಸಲು) ಲೋಕಸಭಾ ಕ್ಷೇತ್ರದ ಚುನಾವಣೆ ಹಿನ್ನೆಲೆಯಲ್ಲಿ ಇದೇ ಏಪ್ರಿಲ್ 23ರಂದು ಮತದಾನ ನಡೆಯಲಿದೆ. ಈ ಸಂದರ್ಭದಲ್ಲಿ ಶಾಂತಿ ಮತ್ತು ಸುವ್ಯವಸ್ಥೆ ಕಾಪಾಡಲು ಅನುಕೂಲವಾಗುವಂತೆ ಇದೇ ಏಪ್ರಿಲ್ 23ರ ಬೆಳಗಿನ ೬ ರಿಂದ ಸಂಜೆ 6 ಗಂಟೆಯವರೆಗೆ ಅಥವಾ ಮತಗಟ್ಟೆಯಲ್ಲಿ ಮತದಾನವು ಮುಕ್ತಾಯಗೊಂಡು ಮತಗಟ್ಟೆ ಸಿಬ್ಬಂದಿಗಳು ಮತಗಟ್ಟೆಯಿಂದ ತೆರಳುವವರೆಗೆ ಕಲಬುರಗಿ ಜಿಲ್ಲಾ ವ್ಯಾಪ್ತಿಯಲ್ಲಿ ಬರುವ ಎಲ್ಲ ಮತಗಟ್ಟೆಗಳ ಸುತ್ತಮುತ್ತಲೂ 200 ಮೀಟರ್ ವ್ಯಾಪ್ತಿ ಪ್ರದೇಶವನ್ನು ಸಿ.ಆರ್.ಪಿ.ಸಿ. ಸೆಕ್ಷನ್ 144, 144ಎ ರನ್ವಯ ನಿರ್ಬಂಧಿತ ಪ್ರದೇಶವೆಂದು ಘೋಷಿಸಿ ಕಲಬುರಗಿ ಜಿಲ್ಲಾಧಿಕಾರಿ ಆರ್. ವೆಂಕಟೇಶಕುಮಾರ ಅವರು ಆದೇಶ ಹೊರಡಿಸಿದ್ದಾರೆ.

ಮೆರವಣಿಗೆ ಅಥವಾ 5 ಜನರಿಂಗಿತ ಹೆಚ್ಚು ಜನ ಸೇರುವುದು,  ಯಾವುದೇ ರೀತಿಯ ಮಾರಕಾಸ್ತ್ರ, ಶಸ್ತ್ರಾಸ್ತ್ರ, ಸ್ಫೋಟಕ ವಸ್ತುಗಳನ್ನು ಒಯ್ಯುವುದನ್ನು, ಪ್ರತಿಕೃತಿ ಪ್ರದರ್ಶನ, ದಹನ ಮಾಡುವುದನ್ನು ಮತ್ತು ಬಹಿರಂಗ ಘೋಷಣೆ ಇತ್ಯಾದಿಗಳನ್ನು ನಿಷೇಧಿಸಲಾಗಿದೆ. ಸಾರ್ವಜನಿಕ ವ್ಯಕ್ತಿ ಪ್ರಚೋದನಾತ್ಮಕ ಹಾಗೂ ಉದ್ರೇಕಕಾರಿ ಹಾಡುಗಳು, ಕೂಗಾಟ ಮಾಡುವುದನ್ನು, ವ್ಯಕ್ತಿಗಳ ತೇಜೋವಧೆ ಮಾಡುವಂತಹ ಚಿತ್ರಗಳು, ಚಿಹ್ನೆಗಳು ಹಾಗೂ ಸಾರ್ವಜನಿಕರ ಗಾಂಭಿರ್ಯ ಮತ್ತು ನೈತಿಕತೆಗೆ ಭಂಗ ತರುವಂತಹ ಕೃತ್ಯಗಳಲ್ಲಿ ತೊಡಗುವುದನ್ನು ನಿಷೇಧಿಸಲಾಗಿದೆ.

ಈ ಆದೇಶವು ಚುನಾವಣಾ ಕರ್ತವ್ಯನಿರತ ಮತಗಟ್ಟೆ ಅಧಿಕಾರಿ, ಸಿಬ್ಬಂದಿಗಳಿಗೆ, ಪೊಲೀಸ್ ಅಧಿಕಾರಿಗಳಿಗೆ, ನೇಮಕಗೊಂಡಿರುವ ಚುನಾವಣಾ ಏಜೆಂಟ್ಸ್‌ಗಳಿಗೆ ಹಾಗೂ ಒಬ್ಬೊಬ್ಬರಾಗಿ ಮತಗಟ್ಟೆಗಳಿಗೆ ತೆರಳಿ ಮತದಾನ ಮಾಡುವ ಮತದಾರರಿಗೆ ಅನ್ವಯಿಸುವುದಿಲ್ಲ. ಈ ಆದೇಶವು ಅಂತ್ಯಕ್ರಿಯೇ ಮೆರವಣಿಗೆ ಮತ್ತು ಇನ್ನಿತರ ಪ್ರಾಧಿಕಾರದಿಂದ ಅನುಮತಿ ಪಡೆದ ಪ್ರಕರಣಗಳಿಗೆ ಅನ್ವಯಿಸುವುದಿಲ್ಲ. ಸಂಬಂಧಪಟ್ಟ ಅಧಿಕಾರಿಗಳು ಈ ಆದೇಶವನ್ನು ಕಟ್ಟುನಿಟ್ಟಾಗಿ ಜಾರಿಗೊಳಿಸುವುದು ಮತ್ತು ಆದೇಶ ಉಲ್ಲಂಘಿಸಿದವರ ವಿರುದ್ಧ ಕಾನೂನಿನನ್ವಯ ಕ್ರಮ ಕೈಗೊಳ್ಳಬೇಕೆಂದು ಅವರು ತಿಳಿಸಿದ್ದಾರೆ.

emedialine

Recent Posts

ತೊಗರಿ ಬೆಳೆ‌ ಹಾನಿ ಪ್ರದೇಶ ವೀಕ್ಷಿಸಿದ ಶಾಸಕ ಅಲ್ಲಮಪ್ರಭು ಪಾಟೀಲ

ಕಲಬುರಗಿ: ಕಲಬುರಗಿ ದಕ್ಷಿಣ ಮತಕ್ಷೇತ್ರದ ಶಾಸಕ ಅಲ್ಲಮಪ್ರಭು ಪಾಟೀಲ ಅವರು ಶನಿವಾರ ಸಂಜೆ ಕ್ಷೇತ್ರದ ಭೀಮಳ್ಳಿ ಗ್ರಾಮದ ರೈತರ ಹೊಲಗಳಿಗೆ…

4 hours ago

ಕಷ್ಟಗಳಿಗೆ ಕುಗ್ಗದೇ ಸವಾಲಾಗಿ ಸ್ವಿಕರಿಸಿ

ಕಲಬುರಗಿ: ಕಷ್ಟಗಳು ಬಂದಾಗ ಕುಗ್ಗದೆ, ಆ ಕಷ್ಟಗಳನ್ನು ಸವಾಲಾಗಿ ಸ್ವೀಕರಿಸಿ ಮೇಲೇಳಬೇಕು ಎಂದು ತಾಜ್ ನಗರದ ಆರೋಗ್ಯ ಕೇಂದ್ರದ ಹಿರಿಯ…

4 hours ago

ಕಲಬುರಗಿ: ಹಾಸ್ಯ ಕಲಾವಿದ ರೇವಣಸಿದ್ಧ ಸ್ವಾಮಿ ದಂಪತಿಗೆ ಗೆಳೆಯರ ಬಳಗದಿಂದ ಸತ್ಕರಿಸಲಾಯಿತು.

ಪರೋಪಕಾರ ಸೇವೆಯಿಂದ ಆತ್ಮತೃಪ್ತಿ: ಹಿರೇಮಠ ಕಲಬುರಗಿ: ನಗರ ಹೊರವಲಯದ ಸೈಯದ್ ಚಿಂಚೋಳಿ ರಸ್ತೆಯ ಬಳಿ ಇರುವ ಕೆವಿಪಿ ದಣ್ಣೂರ ಪಿಯು…

4 hours ago

ಸಾವಿರ ಸೀರೆ ವಿತರಿಸಿ ಸಚಿವ ಪ್ರಿಯಾಂಕ್ ಜನ್ಮದಿನ ಆಚರಣೆ

  ವಾಡಿ (ಕಲಬುರಗಿ): ಪುರಸಭೆ ಮಾಜಿ ಸದಸ್ಯ ಹಾಗೂ ಕಾಂಗ್ರೆಸ್ ಪಕ್ಷದ ಯುವ ಮುಖಂಡ ಸೂರ್ಯಕಾಂತ ರದ್ದೇವಾಡಿ ಅವರು ಶುಕ್ರವಾರ…

20 hours ago

ಮೂರೂ ಕ್ಷೇತ್ರದಲ್ಲಿ ಕಾಂಗ್ರೆಸ್ ಗೆಲುವು: ಕಾರ್ಯಕರ್ತರಿಂದ ವಿಜಯೋತ್ಸವ

ಕಲಬುರಗಿ: ಸಂಡೂರ, ಶಿಗ್ಗಾವಿ ಹಾಗೂ ಚನ್ನಪಟ್ಟಣ ಸೇರಿದಂತೆ ಮೂರು ವಿಧಾಸಭಾ ಕ್ಷೇತ್ರದ ಉಪ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷದ ಅಭ್ಯರ್ಥಿಗಳು ಭರ್ಜರಿ…

23 hours ago

ಸಿದ್ದಸಿರಿ ಹೋರಾಟ ಪ್ರಾಯೋಜಿತ: ಶರಣು ಪಾಟೀಲ್

ಚಿಂಚೋಳಿ: ಕಾನೂನು ತೊಡಕಿನಿಂದ ಸ್ಥಗಿತಗೊಂಡ ಸಿದ್ದಸಿರಿ ಎಥೆನಾಲ್ ಕಾರ್ಖಾನೆ ಪ್ರಾರಂಭಕ್ಕೆ ಕರ್ನಾಟಕ ಮಾಲಿನ್ಯ ನಿಯಂತ್ರಣ ಮಂಡಳಿ ಅನುಮತಿ ನೀಡಬೇಕೆಂದು ಒತ್ತಾಯಿಸಿ…

1 day ago