ಕಲಬುರಗಿ : ಕಾಂಗ್ರೆಸ್ ಹಿಂದುಳಿದ ವರ್ಗದ ಜಿಲ್ಲಾ ಅಧ್ಯಕ್ಷ ಧರ್ಮರಾಜ ಹೇರೂರ ಅವರ ಆದೇಶದ ಮೇರೆಗೆ ಜಿಲ್ಲಾ ಕಾಂಗ್ರೆಸ್ ಸಮಿತಿ ವ್ಯಾಪ್ತಿಯದ ದಕ್ಷಿಣ ವಿಧಾನಸಭಾ ಕ್ಷೇತ್ರದ ವ್ಯಾಪ್ತಿಯಲ್ಲಿ ಬರುವ ಕಲಬುರಗಿ ದಕ್ಷಿಣ ನಗರ ಕಾಂಗ್ರೆಸ್ ಸಮಿತಿ ಇತರೆ ಹಿಂದುಳಿದ ವಿಭಾಗದ ಕಾರ್ಯಾಧ್ಯಕ್ಷರನ್ನಾಗಿ ಸತಿಶಸಿಂಗ್ ಜೆ ಠಾಕೂರ ಅವರನ್ನು ನೇಮಕ ಮಾಡಲಾಗಿದೆ ಎಂದು ತಿಳಿಸಿದ್ದಾರೆ.
ಕಾಂಗ್ರೆಸ್ ಪಕ್ಷದ ಸಂಘಟನೆ ಮತ್ತು ಬಲವರ್ಧನೆಗಾಗಿ ಹಗಲಿರುಳು ಶ್ರಮ ವಹಿಸುತ್ತಿರೆಂದು ನಂಬಿ ಕಾಂಗ್ರೆಸ್ ಪಕ್ಷದ ಈ ಮಹತ್ವದ ಜವಾಬ್ದಾರಿಯನ್ನು ತಮಗೆ ವಹಿಸಲಾಗಿದೆ. ತಾವುಗಳು ಈ ಜವಾಬ್ದಾರಿಯನ್ನು ಹೊತ್ತುಕೊಂಡು, ಕಾಂಗ್ರೆಸ್ ಪಕ್ಷದ ಎಲ್ಲಾ ಮುಖಂಡರು ಹಾಗೂ ಕಾರ್ಯಕರ್ತರು, ಮಹಿಳೆಯರ ಸಹಯೋಗದೊಂದಿಗೆ ಹೆಚ್ಚಿನ ರೀತಿಯಲ್ಲಿ ಕಾಂಗ್ರೆಸ್ ಪಕ್ಷಕ್ಕೆ ಇತರೆ ಬಲಪಡಿಸಬೇಕೆಂದು ಪ್ರಕಟನೆಯಲ್ಲಿ ತಿಳಿಸಿದ್ದಾರೆ.