ಬಿಸಿ ಬಿಸಿ ಸುದ್ದಿ

ಕಾಳಗಿ: ಜಗದ್ಗುರು ಶ್ರೀ ರೇಣುಕಾಚಾರ್ಯರ 51 ಅಡಿ ಮೂರ್ತಿ ಲೋಕಾರ್ಪಣೆ

ಕಾಳಗಿ: ಕಲಬುರಗಿ ಜಿಲ್ಲೆ ಕಾಳಗಿ ತಾಲೂಕಿನ ರೇವಗ್ಗಿ, (ರಟಕಲ್) ನಲ್ಲಿ ಕಲಬುರಗಿ ಲೋಕಸಭಾ ಸದಸ್ಯರಾದ ಶ್ರೀ ಉಮೇಶ್ ಜಾದವ್ ರವರ ತಂದೆಯವರಾದ ದಿವಂಗತ ಶ್ರೀ ಗೋಪಾಲದೇವ ಜಾಧವ್ ರವರ ಸ್ಮರಣಾರ್ಥವಾಗಿ ಜಗದ್ಗುರು ಶ್ರೀ ರೇಣುಕಾಚಾರ್ಯರ 51 ಅಡಿ ಎತ್ತರದ ಮೂರ್ತಿ,ಹರಗುರು ಚರಮೂರ್ತಿಗಳ ಸಮ್ಮುಖದಲ್ಲಿ ಹೋಮ ಹವನ ಪೂಜೆಯಲ್ಲಿ ಉಮೇಶ್ ಜಾಧವ್ ದಂಪತಿ ಹಾಗೂ ಶಾಸಕರಾದ ಅವಿನಾಶ್ ಜಾಧವ್ ಪಾಲ್ಗೊಳ್ಳುವ ಮೂಲಕ ಲೋಕಾರ್ಪಣೆ ಮಾಡಿದರು.ನಂತರ ನಡೆದ ಧರ್ಮ ಸಭೆಯನ್ನು ವಿವಿಧ ಮಠಾಧೀಶರು ಹಾಗೂ ಲೋಕಸಭಾ ಸದಸ್ಯರಾದ ಉಮೇಶ್ ಜಾಧವ್ ಕಾರ್ಯಕ್ರಮ ಉದ್ಘಾಟಿಸಿದರು.

ಕಾರ್ಯಕ್ರಮ ಉದ್ದೇಶಿಸಿ ಮಾತನಾಡಿದ ಡಾ. ಉಮೇಶ್ ಜಾಧವ್ ಮಠಗಳಿಂದ ಸಾಮಾಜಿಕ ಸ್ವಾಸ್ಥ್ಯ ಸ್ಥಿರವಾಗಿದೆ. ಮಠಗಳಲ್ಲಿ ಆರೋಗ್ಯ, ಕಲಹ,ರಾಜಕೀಯ ಹಲವಾರು ಸಮಸ್ಯೆಗಳಿಗೆ ಪರಿಹಾರ ಒದಗಿಸುವ ಶಕ್ತಿ ಇದೆ ಎಂದರು. ಇವತ್ತು ನಮ್ಮ ಪ್ರಧಾನ ಮಂತ್ರಿಗಳಾದ ಶ್ರೀ ನರೇಂದ್ರ ಮೋದಿಯವರು ಸನಾತನ ಧರ್ಮದ ಉಳಿವಿಗಾಗಿ ಕಾಶಿ ವಿಶ್ವನಾಥ ದೇವಾಲಯ, ರಾಮಜನ್ಮಭೂಮಿ ಅನೇಕ ದೇವಾಲಯಗಳನ್ನು ನವಿಕರಿಸಿದ್ದರಿಂದಾಗಿ ಇವತ್ತು ದೇಶದಲ್ಲಿ ಬಹುತೇಕ ಜನ ಭಕ್ತಿ ಮಾರ್ಗದಲ್ಲಿ ನಡೆದ್ದು ದೇಶದ ಸಂಸ್ಕೃತಿ, ಪರಂಪರೆ ಬಗ್ಗೆ ಅಭಿಮಾನ ಬೆಳೆಸಿಕೊಳ್ಳುವತಾಗಿದೆ. ಹಾಗೆಯೇ ನಾವು ರಾಜಕೀಯವಾಗಿ, ಸಾಮಾಜಿಕವಾಗಿ, ಬಲಿಷ್ಠರಾಗಿ ಬೆಳೆಯಲು ನಮಗೆ ವೀರಶೈವ ಲಿಂಗಾಯತರ ಆಶೀರ್ವಾದ ಬೇಕೆ ಬೇಕೆಂದು ತಿಳಿಸಿದರು.

ಮಗನನ್ನು ನಿಮ್ಮೆಲ್ಲರ ಒತ್ತಾಯದ ಮೇರೆಗೆ ರಾಜಕೀಯಕ್ಕೆ ತಂದಿದ್ದು ಚಿಂಚೋಳ್ಳಿ ಕ್ಷೇತ್ರದ ಬಹು ದಿನಗಳ ಬೇಡಿಕೆಗಳಾದ ಐನಪುರ್ ಏತನೀರಾವರಿ, ಚಿಂಚೋಳಿಯ ಶುಗರ್ ಫ್ಯಾಕ್ಟರಿ,ಜಲಜೀವನ್ ಮಿಷನ್,ಚಿಂಚೋಳಿಯ ಮಿನಿವಿಧಾನ ಸೌದ,ರಸ್ತೆಗಳು,ಬಸ ನಿಲ್ದಾಣ ಸೇರಿದಂತೆ ಹತ್ತು ಹಲವಾರು ಅಭಿವೃದ್ಧಿ ಕಾರ್ಯಗಳು ಶಾಸಕರಾದ ಅವಿನಾಶ ಜಾಧವ ಅವರು ಮಾಡಿದ್ದಾರೆ ಬರುವಂತಹ ಚುನಾವಣೆಯಲ್ಲಿ ಮತ್ತೊಮ್ಮೆ ಗೆಲ್ಲಿಸಿ ಈ ಕ್ಷೆತ್ರದ ಅಭಿವೃದ್ಧಿಯ ಕೆಲಸ ಮಾಡುತೇವೆ ಎಂದರು.

ಈ ಸಂದರ್ಭದಲ್ಲಿ ವಿವಿಧ ಮಠದ ಮಠದಿಶಾರು ಹಾಗೂ ವಿಜಯಕುಮಾರ್ ಚೇಂಗಟಿ, ಶಿವರಾಜ್ ಪಾಟೀಲ್ ಗೊಣಗಿ,ಇಮ್ತಿಯಾಜ್ ಅಲಿ, ಅನೇಕರು ಉಪಸ್ಥಿತರಿದ್ದರು

emedialine

Recent Posts

ಸಂವಿಧಾನ ಸಮರ್ಪಣಾ ದಿನದ ಅಂಗವಾಗಿ ಸಂವಿಧಾನ ಓದು ಕಾರ್ಯಕ್ರಮ

ಕಲಬುರಗಿ: ಸ್ಲಂ ಜನರ ಸಂಘಟನೆ ಕರ್ನಾಟಕ ವತಿಯಿಂದ ಆಯೋಜಿಸಿದ ಡಾ. ಬಾಬಾ ಸಾಹೇಬ್ ಅಂಬೇಡ್ಕರ್ ವೃತ್ತ ಹೈ -ಕೋರ್ಟ್ ರಸ್ತೆ…

4 hours ago

ಶೋಷಿತ ಜನಜಾಗೃತಿ ವೇದಿಕೆ ವತಿಯಿಂದ ಪ್ರಧಾನ ಮಂತ್ರಿ ನರೇಂದ್ರ ಮೋದಿಗೆ ಮನವಿ

ಕಲಬುರಗಿ: ಕರ್ನಾಟಕ ರಾಜ್ಯದ ಕಲಬುರಗಿ-ಜಿಲ್ಲೆಯಲ್ಲಿ ದಲಿತ (ಮಾದಿಗ) ಸಮುದಾಯದವರಿಗೆ ರಾಷ್ಟ್ರೀಕೃತ ಬ್ಯಾಂಕ್‍ಗಳು ಸಾಲ ಸೌಲಭ್ಯ ನೀಡದಿರುವ ಕುರಿತು ಶೋಷಿತ ಜನಜಾಗೃತಿ…

4 hours ago

ಪ್ರಶಸ್ತಿ ಪುರಸ್ಕೃತರು ಸನ್ಮಾನ ಸಮಾರಂಭಕ್ಕೆ ಗೈರು: ಡಾ. ಎಸ್.ಎಸ್. ಗುಬ್ಬಿ ಬೇಸರ

ಕಲಬುರಗಿ: ಪ್ರಶಸ್ತಿ ಪುರಸ್ಕೃತರು ಸನ್ಮಾನ ಸಮಾರಂಭಕ್ಕೆ ಗೈರಾಗಿರುವುದು ಬೇಸರದ ಸಂಗತಿ ಎಂದು ಜಿಲ್ಲಾ ವೈದ್ಯ ಸಾಹಿತ್ಯ ಪರಿಷತ್ ಅಧ್ಯಕ್ಷ ಹಾಗೂ…

4 hours ago

ಹಣೆಯ ಮೇಲೆ ಹಚ್ಚಿದ ವಿಭೂತಿ ಆತ್ಮವಿಶ್ವಾಸ ಹೆಚ್ಚಿಸುತ್ತದೆ: ಅರ್ಪಿತಾ ಪಾಟೀಲ

ಕಲಬುರಗಿ: ಹಣೆಯ ಮೇಲೆ ಹಚ್ಚಿದ ವಿಭೂತಿ ಸಮಾನತೆ ಸಾರುವದರೊಂದಿಗೆ ಮನುಷ್ಯನ ಆತ್ಮವಿಶ್ವಾಸ ಹೆಚ್ಚಿಸುತ್ತದೆ ಎಂದು ಆರಾಧನಾ ಪದವಿ ಪೂರ್ವ ಕಾಲೇಜಿನ…

4 hours ago

ಕಲಬುರಗಿ ಕೇಂದ್ರ ಕಾರಾಗೃಹದಲ್ಲಿ ಸಂವಿಧಾನ ದಿನ ಆಚರಣೆ

ಕಲಬುರಗಿ ಕೇಂದ್ರ ಕಾರಾಗೃಹದಲ್ಲಿರುವ ಸಂವಿಧಾನ ದಿನವನ್ನು ಸರ್ಕಾರದ ಸುತ್ತೋಲೆ ಆದೇಶದಂತೆ ಕಾರಾಗೃಹದ ಲಿಪಿಕ/ ಕಾನಿನಿರ್ವಹಕ ಅಧಿಕಾರಿ/ಸಿಬ್ಬಂದಿಯವರೊಂದಿಗೆ ಡಾ|| ಬಾಬಾ ಸಾಹೇಬ್…

4 hours ago

ಸಂವಿಧಾನವನ್ನು ರಕ್ಷಿಸಲು ಜವಾಬ್ದಾರಿ ಯುವಕರು ಮೇಲಿದೆ : ಹಿರಿಯ ವಕೀಲ ವೈಜನಾಥ ಎಸ್ ಝಳಕಿ

ಕಲಬುರಗಿ; ಸಂವಿಧಾನವನ್ನು ರಕ್ಷಿಸಲು ಮತ್ತು ಜನರಲ್ಲಿ ಸಂವಿಧಾನದ ಮೇಲಿನ ನಂಬಿಕೆಯನ್ನು ಬಲಪಡಿಸಲು ಜಾಗೃತ ಶಕ್ತಿಯಾಗಿ ಕಾರ್ಯನಿರ್ವಹಿಸುವ ಗುರುತರವಾದ ಜವಾಬ್ದಾರಿಯನ್ನು ದೇಶದ…

4 hours ago