ಬಿಸಿ ಬಿಸಿ ಸುದ್ದಿ

ಸತ್ಯ ದರ್ಶನ ಶೋಧ ಮಾಡಿದ ಬುದ್ಧ: ಡಾ.ವಿ.ಟಿ ಕಾಂಬಳೆ

ಕಲಬುರಗಿ : ಬುದ್ಧನು ಮನುಷ್ಯರು ಬಳಲುತ್ತಿರುವ ಕಾರಣವನ್ನು ವಿವರಿಸಿದ್ದಾನೆ . ಅವರ ಪ್ರಕಾರ, ಮನುಷ್ಯರು ಐಶ್ವರ್ಯಕ್ಕಾಗಿ ಆಸೆಗಳನ್ನು ಮತ್ತು ಹಂಬಲಗಳಿಗೆ ಒಳಗಾಗುತ್ತಾರೆ ಎಂದು ಗುಲ್ಬರ್ಗ ವಿಶ್ವವಿದ್ಯಾಲಯದ ಸಮಾಜ ವಿಜ್ಞಾನ ನಿಕಾಯದ ಹಿರಿಯ ಡೀನರಾದ ಪ್ರೊ, ವಿ. ಟಿ. ಕಾಂಬಳೆ ಹೇಳಿದರು.

ಕಲಬುರ್ಗಿಯ ಕೃಷ್ಣ ನಗರದ ಬೋಧಿವೃಕ್ಷ ಸಾಂಸ್ಕೃತಿಕ ಸೇವಾ ಸಂಘದ ವತಿಯಿಂದ ಹಮ್ಮಿಕೊಂಡಿದ್ದ ಮಧುರ ಸಂಜೆ ಸಂಗೀತ ಮತ್ತು ಧಮ್ಮ ದೀಪ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿ ಜೀವನದ ಸತ್ಯತೆಯನ್ನು ತಿಳಿಯುವುದಕ್ಕಾಗಿ ಬುದ್ಧನು ತನ್ನ ಎಂಭತ್ತು ವರ್ಷದವರೆಗೆ ಪ್ರಪಂಚ ಪರ್ಯಟನೆ ಮಾಡುತ್ತಾನೆ.

ಅಲ್ಲದೇ ಪರ್ಯಟನೆಯ ಜೊತೆ ಜೊತೆಗೆ ಸತ್ಯ ದರ್ಶನದ ಬಗೆಗೆ ಜನರಿಗೆ ಭೋಧನೆಗಳನ್ನು ನಿರಂತರವಾಗಿ ಮಾಡುತ್ತಾನೆ ಹಾಗೂ ಬಡವ ಹಾಗೂ ದುರ್ಬಲರ ಸೇವೆಯನ್ನು ಮಾಡುತ್ತಾ ವಿಮೋಚನೆಗಾಗಿ ಕೆಲಸ ಕಾರ್ಯಗಳನ್ನು ಮಾಡಬೇಕು ಹಾಗೂ ಈ ಜಗತ್ತಿನಲ್ಲಿ ಯಾವುದೂ ಶಾಶ್ವತವಲ್ಲ ಹಾಗಾಗಿ ನಾವು ಪರರಿಗೆ ಹಾಗೂ ಮಾನವೀಯತೆಗೆ ಬೆಲೆ ಕೊಡಬೇಕು ಎಂಬುವುದು ಗೌತಮ ಬುದ್ಧನು ಭೋಧಿಸಿದ ಮುಖ್ಯ ತತ್ವಗಳು ಎಂದು ಹೇಳಿದರು.

ಬುದ್ಧನು ಇಹ ಲೋಕವನ್ನು ತ್ಯಜಿಸುವಾಗ ಎಂಭತ್ತು ವರುಷಗಳಾಗಿದ್ದರೂ ಕೂಡ ಯಾವುದೇ ದಣಿವಿಲ್ಲದೇ ಸತ್ಯ ದರ್ಶನಕ್ಕಾಗಿ ನಿರಂತವಾದ ಪ್ರಪಂಚ ಪರ್ಯಟನೆ ಮಾಡುತ್ತಾನೆ. ಅಲ್ಲದೇ ಕೊನೆಗೆ ತನ್ನ ಅನುಯಾಯಿಗಳಿಗೆ ಈ ಜಗತ್ತಿನಲ್ಲಿ ಯಾವುದೂ ಶಾಶ್ವತ ಅಲ್ಲ.ಹಾಗಾಗಿ ನಿಮ್ಮ ವಿಮೋಚನೆಗಾಗಿ‌ ಮಾತ್ರ ಕೆಲಸ ಮಾಡಿ ಎಂಬ ಕೊನೆಯ ನುಡಿಗಳನ್ನು ನೀಡಿ ಲೋಕದಲ್ಲಿ ಅಜರಾಮರನಾಗುತ್ತಾರೆ ಎಂದು ಅವರು ಹೇಳಿದರು.

ಮುಖ್ಯ ಅತಿಥಿಗಳಾಗಿ ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಜಂಟಿ ನಿರ್ದೇಶಕರಾದ ಕೆ. ಎಚ್. ಚನ್ನೂರ, ಡಾ. ವಿಜಯಕುಮಾರ ಸಾಲಿಮನಿ, ಕರ್ನಾಟಕ ರಕ್ಷಣಾ ವೇದಿಕೆ ಅಧ್ಯಕ್ಷ ಸಚೀನ ಫರತಾಬಾದ, ವಿಜಯಂದ್ರ ಕೋಡ್ಲಾ ಕಲಾವಿದ ಸಿದ್ಧಾರ್ಥ ಚಿಮ್ಮಾಯಿಇದಲಾಯಿ, ಬಸವರಾಜ ಶಿವಕೇರಿ ಸುಭಾಷ್ ರಾಜಕುಮಾರ ಕುರನೆ, ರವಿ ಭಂಡಾರಿ, ಚಕ್ರವರ್ತಿ ಮತ್ತು ಬಡಾವಣೆ ಗಣ್ಯರು ಭಾಗವಹಿಸಿದ್ದರು.

emedialine

Recent Posts

ಸಂವಿಧಾನ ಸಮರ್ಪಣಾ ದಿನದ ಅಂಗವಾಗಿ ಸಂವಿಧಾನ ಓದು ಕಾರ್ಯಕ್ರಮ

ಕಲಬುರಗಿ: ಸ್ಲಂ ಜನರ ಸಂಘಟನೆ ಕರ್ನಾಟಕ ವತಿಯಿಂದ ಆಯೋಜಿಸಿದ ಡಾ. ಬಾಬಾ ಸಾಹೇಬ್ ಅಂಬೇಡ್ಕರ್ ವೃತ್ತ ಹೈ -ಕೋರ್ಟ್ ರಸ್ತೆ…

10 hours ago

ಶೋಷಿತ ಜನಜಾಗೃತಿ ವೇದಿಕೆ ವತಿಯಿಂದ ಪ್ರಧಾನ ಮಂತ್ರಿ ನರೇಂದ್ರ ಮೋದಿಗೆ ಮನವಿ

ಕಲಬುರಗಿ: ಕರ್ನಾಟಕ ರಾಜ್ಯದ ಕಲಬುರಗಿ-ಜಿಲ್ಲೆಯಲ್ಲಿ ದಲಿತ (ಮಾದಿಗ) ಸಮುದಾಯದವರಿಗೆ ರಾಷ್ಟ್ರೀಕೃತ ಬ್ಯಾಂಕ್‍ಗಳು ಸಾಲ ಸೌಲಭ್ಯ ನೀಡದಿರುವ ಕುರಿತು ಶೋಷಿತ ಜನಜಾಗೃತಿ…

10 hours ago

ಪ್ರಶಸ್ತಿ ಪುರಸ್ಕೃತರು ಸನ್ಮಾನ ಸಮಾರಂಭಕ್ಕೆ ಗೈರು: ಡಾ. ಎಸ್.ಎಸ್. ಗುಬ್ಬಿ ಬೇಸರ

ಕಲಬುರಗಿ: ಪ್ರಶಸ್ತಿ ಪುರಸ್ಕೃತರು ಸನ್ಮಾನ ಸಮಾರಂಭಕ್ಕೆ ಗೈರಾಗಿರುವುದು ಬೇಸರದ ಸಂಗತಿ ಎಂದು ಜಿಲ್ಲಾ ವೈದ್ಯ ಸಾಹಿತ್ಯ ಪರಿಷತ್ ಅಧ್ಯಕ್ಷ ಹಾಗೂ…

10 hours ago

ಹಣೆಯ ಮೇಲೆ ಹಚ್ಚಿದ ವಿಭೂತಿ ಆತ್ಮವಿಶ್ವಾಸ ಹೆಚ್ಚಿಸುತ್ತದೆ: ಅರ್ಪಿತಾ ಪಾಟೀಲ

ಕಲಬುರಗಿ: ಹಣೆಯ ಮೇಲೆ ಹಚ್ಚಿದ ವಿಭೂತಿ ಸಮಾನತೆ ಸಾರುವದರೊಂದಿಗೆ ಮನುಷ್ಯನ ಆತ್ಮವಿಶ್ವಾಸ ಹೆಚ್ಚಿಸುತ್ತದೆ ಎಂದು ಆರಾಧನಾ ಪದವಿ ಪೂರ್ವ ಕಾಲೇಜಿನ…

10 hours ago

ಕಲಬುರಗಿ ಕೇಂದ್ರ ಕಾರಾಗೃಹದಲ್ಲಿ ಸಂವಿಧಾನ ದಿನ ಆಚರಣೆ

ಕಲಬುರಗಿ ಕೇಂದ್ರ ಕಾರಾಗೃಹದಲ್ಲಿರುವ ಸಂವಿಧಾನ ದಿನವನ್ನು ಸರ್ಕಾರದ ಸುತ್ತೋಲೆ ಆದೇಶದಂತೆ ಕಾರಾಗೃಹದ ಲಿಪಿಕ/ ಕಾನಿನಿರ್ವಹಕ ಅಧಿಕಾರಿ/ಸಿಬ್ಬಂದಿಯವರೊಂದಿಗೆ ಡಾ|| ಬಾಬಾ ಸಾಹೇಬ್…

10 hours ago

ಸಂವಿಧಾನವನ್ನು ರಕ್ಷಿಸಲು ಜವಾಬ್ದಾರಿ ಯುವಕರು ಮೇಲಿದೆ : ಹಿರಿಯ ವಕೀಲ ವೈಜನಾಥ ಎಸ್ ಝಳಕಿ

ಕಲಬುರಗಿ; ಸಂವಿಧಾನವನ್ನು ರಕ್ಷಿಸಲು ಮತ್ತು ಜನರಲ್ಲಿ ಸಂವಿಧಾನದ ಮೇಲಿನ ನಂಬಿಕೆಯನ್ನು ಬಲಪಡಿಸಲು ಜಾಗೃತ ಶಕ್ತಿಯಾಗಿ ಕಾರ್ಯನಿರ್ವಹಿಸುವ ಗುರುತರವಾದ ಜವಾಬ್ದಾರಿಯನ್ನು ದೇಶದ…

10 hours ago