ಕಲಬುರಗಿ; ರಾಜ್ಯ ಸರ್ಕಾರವು ನೀರಾವರಿ ಇಲಾಖೆಯಿಂದ ಅನೇಕ ಯೋಜನೆಗಳನ್ನು ಜಾರಿಗೆ ತಂದಿದ್ದು, ಸರ್ಕಾರದಿಂದ ಸಿಗುವಂತ ಸೌಲಭ್ಯಗಳನ್ನು ರೈತರು ಸಮರ್ಪಕವಾಗಿ ಬಳಕೆ ಮಾಡಿಕೊಳ್ಳಬೇಕೆಂದು ಬೃಹತ್ ಮತ್ತು ಮಧ್ಯಮ ನೀರಾವರಿ ಸಚಿವರಾದ ಗೋವಿಂದ್ ಕಾರಜೋಳ್ ಅವರು ಹೇಳಿದರು.
ಮಂಗಳವಾರದಂದು ಸೇಡಂ ಪಟ್ಟಣದ ತಾಲೂಕಾ ಕ್ರೀಡಾಂಗಣದಲ್ಲಿ ಮಂಗಳವಾರ ನಡೆದ 160 ಕೋಟಿ ರೂ. ವೆಚ್ಚದ ಮೊದಲನೇ ಹಂತದ ಕಾಗಿಣಾ ಏತ ನೀರಾವರಿ ಯೋಜನೆ, 6 ಕೋಟಿ ರೂ. ವೆಚ್ಚದಲ್ಲಿ ನಿರ್ಮಿಸಲಾದ ನೂತನ ಮಿನಿ ವಿಧಾನಸೌದ, ಸೇಡಂ ನೂತನ ಬಸ್ ನಿಲ್ದಾಣ, 22 ಬಸ್‍ಗಳಿಗೆ ಚಾಲನೆ, ಕೆರೆಗೆ ನೀರು ತುಂಬಿಸುವ ಯೋಜನೆ ಸೇರಿ ಸುಮಾರು 1,000 ಕೋಟಿ ರೂ.ಗಿಂತ ಹೆಚ್ಚಿನ ಮೊತ್ತದ ವಿವಿಧ ಅಭಿವೃದ್ಧಿಗೆ ಕಾಮಗಾರಿಗಳ ಶಂಕುಸ್ಥಾಪನೆ ನೆರವೇರಿಸಿ ಹಾಗೂ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದರು.
ರಾಜ್ಯ ಸರಕಾರದಿಂದ ನೀರಾವರಿಗೆ ಹೆಚ್ಚಿನ ಆದ್ಯತೆ ನೀಡಲಾಗುತ್ತಿದೆ. ಇಡೀ ರಾಜ್ಯದಲ್ಲಿ 66 ಲಕ್ಷ ಹೆಕ್ಟೇರ್ ಪ್ರದೇಶ ನೀರಾವರಿ ಮಾಡಬಹುದಾಗಿದೆ. ಅದರಲ್ಲಿ 40 ಲಕ್ಷ ಹೆಕ್ಟೇರ್ ಬೃಹತ್ ನೀರಾವರಿ, 10 ಲಕ್ಷ ಸಣ್ಣ ನೀರಾವರಿ ಮತ್ತು 16 ಲಕ್ಷ ಹೆಕ್ಟೇರ್ ರೈತರ ಸ್ವಾವಲಂಬಿಯಾಗಿ ನೀರಾವರಿ ಮಾಡಬಹುದಾಗಿದೆ. ಅದರಲ್ಲಿ ಈಗಾಗಲೆ ಬೃಹತ್ ನೀರಾವರಿ 30 ಲಕ್ಷ ಹಾಗೂ ಸಣ್ಣ ನೀರಾವರಿ 3 ಲಕ್ಷ ಹೆಕ್ಟೇರ್ ಪ್ರದೇಶ ನೀರಾವರಿ ಮಾಡಲಾಗಿದೆ. ಕಾಗಿಣಾದಂತಹ ಯೋಜನೆಗಳು ಪೂರ್ಣ ಪ್ರಮಾಣದಲ್ಲಿ ಅನುμÁ್ಠನ ಆದರೆ ಎಲ್ಲೆಡೆ ನೀರಾವರಿ ಆಗಲಿದೆ ಎಂದರು.
ಕಲ್ಯಾಣ ಕರ್ನಾಟಕ ರಸ್ತೆ ಸಾರಿಗೆ ನಿಗಮದ ಅಧ್ಯಕ್ಷ ಹಾಗೂ ಸೇಡಂ ಶಾಸಕರಾದ ರಾಜಕುಮಾರ ಪಾಟೀಲ್ ತೆಲ್ಕೂರ ಮಾತನಾಡಿ, ಪಟ್ಟಣದಲ್ಲಿ 10 ಕೋಟಿ ರೂ. ವೆಚ್ಚದಲ್ಲಿ ಸುಸಜ್ಜಿತ ಬಸ್ ನಿಲ್ದಾಣ ನಿರ್ಮಾಣ ಮಾಡಲಾಗಿದೆ. ತಾಲೂಕಿನ ಪ್ರತಿ ಮನೆಗೂ ಜೆಜೆಎಂ ಯೋಜನೆಯಡಿ ನಳದ ಕನೆಕ್ಷನ್ ನೀಡಲಾಗಿದೆ. ತಾಲೂಕಿನ ಅಭಿವೃದ್ಧಿಗಾಗಿ ತರನಳ್ಳಿ, ಯಡಳ್ಳಿ ಏತ ನೀರಾವರಿ ಯೋಜನೆ ಇಂದು ಜಾರಿ ಮಾಡಲಾಗುತ್ತಿದೆ ಎಂದರು.
ನಾನು ಶಾಸಕನಾಗಿ 1500 ಕೋಟಿ ಅನುದಾನವನ್ನು ಸೇಡಂ ತಾಲೂಕ ತಂದಿದ್ದೇನೆ ರಸ್ತೆ, ಚರಂಡಿ, ಕುಡಿಯುವ ನೀರು, ನಲ್ಲಿ ರೈತರಿಗೆ ನೀರಾವರಿ ಯೋಜನೆಗಳನ್ನು ಸಮರ್ಪಕವಾಗಿ ಜಾರಿಗೆ ತಂದಿದ್ದೇನೆ ಎಂದರು. ಅದೇ ರೀತಿಯಾಗಿ ಡಿ.ಸಿ.ಸಿ. ಬ್ಯಾಂಕಿನಿಂದ ಅನೇಕ ರೈತರಿಗೆ ಬಡ್ಡಿ ಇಲ್ಲದೇ ಸಾಲವನ್ನು ನೀಡಿ ರೈತರ ಸಂಕಷ್ಟದಲ್ಲಿ ಇದ್ದಾಗ ಅವರಿಗೆ ಸಹಕಾರ ನೀಡಿದ್ದೇನೆ ಎಂದರು.
ಅಕಾಲಿಕ ಮರಣ ಹೊಂದಿದ ನಿಗಮದ ಸಿಬ್ಬಂದಿಯ ಅವಲಂಬಿತಗರಿಗೆ ಆಂತರಿಕ ಗುಂಪು ವಿಮಾ ಯೋಜನೆಯ ಮೊತ್ತವನ್ನು ರೂ. 3 ಲಕ್ಷದಿಂದ 10 ಲಕ್ಷಕ್ಕೆ ಹೆಚ್ಚಿಸಿದ್ದೇವೆ ಎಂದರು.
ವೇದಿಕೆ ಮೇಲೆ ಕಲಬುರಗಿ ಗ್ರಾಮೀಣ ಶಾಸಕರಾದ ಬಸವರಾಜ ಮತ್ತಿಮೂಡ, ಕಲ್ಯಾಣ ಕರ್ನಾಟಕ ರಸ್ತೆ ಸಾರಿಗೆ ನಿಗಮದ ವ್ಯವಸ್ಥಾಪಕ ನಿರ್ದೇಶಕ ಎಂ.ರಾಚಪ್ಪ, ಸೇಡಂ ಉಪವಿಭಾಗ ಸಹಾಯಕ ಆಯುಕ್ತ ಕರ್ತಿಕ್ ಎಂ. ಜಿಲ್ಲಾ ಪಂಚಾಯತ ಮಾಜಿ ಸದಸ್ಯ ಶರಣು ಮೆಡಿಕಲ್, ಡಿಸಿಸಿ ಬ್ಯಾಂಕಿನ ಪರ್ವತ ರೆಡ್ಡಿ, ರೇವಣ್ಣ ಸಿದ್ದಪ್ಪ ಪಾಟೀಲ ನಾಗರೆಡ್ಡಿ ದೇಶಮುಖ, ಸೇರಿದಂತೆ ವಿವಿಧ ಇಲಾಖೆಯ ಮುಖಂಡರು ಉಪಸ್ಥಿತರಿದ್ದರು.
ಕಲಬುರಗಿ: ಮಹಿಳೆಯರ ಸಹಭಾಗಿತ್ವ ಮತ್ತು ಕೊಡುಗೆಯಿಲ್ಲದೆ ದೇಶದ ಸರ್ವಾಂಗೀಣ ಅಭಿವೃದ್ಧಿ ಅಸಾಧ್ಯ ಎಂದು ಶರಣಬಸವೇಶ್ವರ ವಿದ್ಯಾವರ್ಧಕ ಸಂಘದ ಅಧ್ಯಕ್ಷೆ ಮಾತೋಶ್ರೀ…
ಕಲಬುರಗಿ: ಕಲಬುರಗಿ ದಕ್ಷಿಣ ಮತಕ್ಷೇತ್ರದ ಶಾಸಕ ಅಲ್ಲಮಪ್ರಭು ಪಾಟೀಲ ಅವರು ಶನಿವಾರ ಸಂಜೆ ಕ್ಷೇತ್ರದ ಭೀಮಳ್ಳಿ ಗ್ರಾಮದ ರೈತರ ಹೊಲಗಳಿಗೆ…
ಕಲಬುರಗಿ: ಕಷ್ಟಗಳು ಬಂದಾಗ ಕುಗ್ಗದೆ, ಆ ಕಷ್ಟಗಳನ್ನು ಸವಾಲಾಗಿ ಸ್ವೀಕರಿಸಿ ಮೇಲೇಳಬೇಕು ಎಂದು ತಾಜ್ ನಗರದ ಆರೋಗ್ಯ ಕೇಂದ್ರದ ಹಿರಿಯ…
ಪರೋಪಕಾರ ಸೇವೆಯಿಂದ ಆತ್ಮತೃಪ್ತಿ: ಹಿರೇಮಠ ಕಲಬುರಗಿ: ನಗರ ಹೊರವಲಯದ ಸೈಯದ್ ಚಿಂಚೋಳಿ ರಸ್ತೆಯ ಬಳಿ ಇರುವ ಕೆವಿಪಿ ದಣ್ಣೂರ ಪಿಯು…
ವಾಡಿ (ಕಲಬುರಗಿ): ಪುರಸಭೆ ಮಾಜಿ ಸದಸ್ಯ ಹಾಗೂ ಕಾಂಗ್ರೆಸ್ ಪಕ್ಷದ ಯುವ ಮುಖಂಡ ಸೂರ್ಯಕಾಂತ ರದ್ದೇವಾಡಿ ಅವರು ಶುಕ್ರವಾರ…
ಕಲಬುರಗಿ: ಸಂಡೂರ, ಶಿಗ್ಗಾವಿ ಹಾಗೂ ಚನ್ನಪಟ್ಟಣ ಸೇರಿದಂತೆ ಮೂರು ವಿಧಾಸಭಾ ಕ್ಷೇತ್ರದ ಉಪ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷದ ಅಭ್ಯರ್ಥಿಗಳು ಭರ್ಜರಿ…