ಮುಸ್ಲಿಂ ಮೀಸಲಾತಿ ರದ್ದು ನಿರ್ಣಯ ಅಸಂವಿಧಾನಿಕ ತೀರ್ಮಾನ: ಪೀರಪಾಶಾ

0
18

ಶಹಾಬಾದ: ಅಲ್ಪಸಂಖ್ಯಾತ ಮುಸ್ಲಿಂ ಸಮುದಾಯಕ್ಕೆ ಇದ್ದ ಮೀಸಲಾತಿಯನ್ನು ರದ್ದು ಮಾಡಿದ ನಿರ್ಣಯ ಬಿಜೆಪಿ ಸರ್ಕಾರದ ಅಸಂವಿಧಾನಿಕ ತೀರ್ಮಾನವಾಗಿದೆ ಎಂದು ಜಿಲ್ಲಾ ಕಾಂಗ್ರೆಸ್ ವಕ್ತಾರ ಪೀರಪಾಶಾ ಆಕ್ರೋಶ ವ್ಯಲಕ್ತಪಡಿಸಿದ್ದಾರೆ.

ಈ ಕುರಿತು ಸುದ್ದಿಗಾರರೊಂದಿಗೆ ಮಾತನಾಡಿದ ಅವರು ಮುಸ್ಲಿಮರಿಗೆ ಪ್ರವರ್ಗ 2ಬಿ ಅಡಿಯಲ್ಲಿದ್ದ ಶೇ 4ರಷ್ಟು ಮೀಸಲಾತಿಯನ್ನು ರದ್ದು ಮಾಡಿರುವುದು ಖಂಡನೀಯ.ಮುಸ್ಲಿಮರ ವಿರುದ್ಧ ಸರ್ಕಾರ ನಡೆಸುವ ಷಡ್ಯಂತ್ರ ಇದಾಗಿದ್ದು, ಬಿಜೆಪಿ ತನ್ನ ಕೋಮುವಾದಿತನವನ್ನು ಪದೇ ಪದೇ ಪ್ರದರ್ಶಿಸುತ್ತಲೇ ಇದೆ. ಬರುವ ಚುನಾವಣೆಯಲ್ಲಿ ಇದರ ಕಾವು ಬಿಜೆಪಿಗೆ ತಟ್ಟದೇ ಇರದು ಎಂದು ಆಕ್ರೋಶ ವ್ಯಕ್ತಪಡಿಸಿದರು.

Contact Your\'s Advertisement; 9902492681

ಸ್ವಾತಂತ್ರ್ಯ ನಂತರ ನಾಗನಗೌಡ ಸಮಿತಿ, ವೆಂಕಟಸ್ವಾಮಿ ಆಯೋಗ ಮತ್ತು 1990 ರ ಚಿನ್ನಪ್ಪ ರೆಡ್ಡಿ ಆಯೋಗ ಕೂಡ ಮುಸ್ಲಿಮರನ್ನು ಹಿಂದುಳಿದ ವರ್ಗಗಳಿಗೆ ಸೇರಿಸಿರುವುದನ್ನು ನಾವು ಕಾಣಬಹುದು. ವಾಸ್ತವಾಂಶ ಹೀಗಿದ್ದರೂ ಸಹ ಮುಸ್ಲಿಂ ಸಮುದಾಯದ ಅಭಿವೃದ್ಧಿಗೆ ತಡೆಯೊಡ್ಡುವ ಹಾಗೂ ಮುಖ್ಯವಾಹಿನಿಗೆ ಬರದಂತೆ ನೋಡಿ ಕೊಳ್ಳುವ ಕುತಂತ್ರ ಮುಂದುವರಿದ ಭಾಗವಾಗಿ 2ಬಿ ಮೀಸಲಾತಿ ರದ್ದುಪಡಿಸಿರುವುದು ದೃಢವಾಗುತ್ತದೆ.

ಸಂವಿಧಾನದ ಆಶಯಗಳಂತೆ ಸರ್ಕಾರ ತನ್ನ ಆಡಳಿತ ನಡೆಸಬೇಕೆ ಹೊರತು ತನ್ನ ಗುಪ್ತ ಅಜೆಂಡಾವನ್ನು ಜಾರಿಗೊಳಿಸಲು ಅಲ್ಲ. ಈ ನಿಟ್ಟಿನಲ್ಲಿ ಮುಸ್ಲಿಮ್ ಸಮುದಾಯಕ್ಕೆ ನಿಗದಿಯಾಗಿದ್ದ 2 ಬಿ ಮೀಸಲಾತಿಯನ್ನು ಮರು ಸ್ಥಾಪಿಸಬೇಕೆಂದು ಆಗ್ರಹಿಸಿದರು. ಅಲ್ಪಸಂಖ್ಯಾತರ ಹಕ್ಕನ್ನು ಕಿತ್ತುಕೊಳ್ಳುವ ಮಟ್ಟಕ್ಕೆ ಇಳಿದಿರುವುದು ಖಂಡನೀಯ. ಎಲ್ಲ ಸಮುದಾಯದ ಹಿತ ಕಾಯುವ ಮುಖ್ಯಮಂತ್ರಿ ಎನ್ನುವ ಅಭಿಪ್ರಾಯಕ್ಕೆ ಬಸವರಾಜ ಬೊಮ್ಮಾಯಿ ತಿಲಾಂಜಲಿ ಇಟ್ಟಿದ್ದಾರೆ. ಬಿಜೆಪಿಯ ಕೋಮುದ್ವೇಷ ಈ ತೀರ್ಮಾನದಲ್ಲಿ ಎದ್ದು ಕಾಣುತ್ತದೆ ಎಂದು ಆರೋಪಿಸಿದರು.

ಕೂಡಲೇ ಅಲ್ಪಸಂಖ್ಯಾತರ ಹಕ್ಕನ್ನು ಕಿತ್ತುಕೊಳ್ಳುವ ನಿರ್ಧಾರ ಕೈಬಿಡಬೇಕು. ಮುಸ್ಲಿಮರ 2ಬಿ ಮೀಸಲಾತಿ ಎಥಾವತ್ತಾಗಿ ಮುಂದುವರಿಸಬೇಕು ಎಂದು ಆಗ್ರಹಿಸಿದರು.

ಪ್ರಧಾನಮಂತ್ರಿ ನರೇಂದ್ರ ಮೋದಿಯವರ ‘ಸಬ್ ಕಾ ಸಾಥ್, ಸಬ್ ಕಾ ವಿಕಾಸ್’ ಎಂಬ ಘೋಷವಾಕ್ಯವನ್ನು ಅದರ ನಿಜವಾದ ಸ್ಪೂರ್ತಿಯಲ್ಲಿ ಅನುಸರಿಸುವಂತೆ ಮನವಿ ಮಾಡಿದ ಅವರು, ಮುಸ್ಲಿಂ ಸಮುದಾಯದಲ್ಲಿ ಅನೇಕರು ಆರ್ಥಿಕವಾಗಿ ಹಿಂದುಳಿದ ಜನರಿದ್ದಾರೆ’ ಎಂದರು.

ಪ್ರತ್ಯುತ್ತರ ಬಿಟ್ಟು

Please enter your comment!
Please enter your name here